Police: ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳ ಮಾಡಿ ‘ಪೊಲೀಸ್ ಇಲಾಖೆ’ ಆದೇಶ

Police: ಪೋಲೀಸ್ ಇಲಾಖೆ (police department) ಹೊರಡಿಸುವ ನೇರ ನೇಮಕಾತಿ ಅಧಿಸೂಚನೆಗಳಿಗೆ ಗರಿಷ್ಠ ಒಂದು ಬಾರಿ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಪೊಲೀಸ್ ಆಡಳಿತ ಮಂಡಳಿ ಎಡಿಜಿಪಿ ಆದೇಶ ಹೊರಡಿಸಿದ್ದಾರೆ.


ಸೆ.6 ರಿಂದ 2027 ಡಿ. 31 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಹೆಚ್ಚಳ ಮಾಡಿ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಎರಡು ವರ್ಷ ಹೆಚ್ಚಳಕ್ಕೆ ಸಿಎಂ ಸೂಚನೆ
ಒಳ ಮೀಸಲಾತಿ ಜಾರಿಗೊಳಿಸಿ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯನವರು, ಕಳೆದೊಂದು ವರ್ಷದಿಂದ ಯಾವುದೇ ನೇಮಕಾತಿ ಅಧಿಸೂಚನೆಯಾಗಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಹೊರಡಿಸುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗುವಂತೆ ಎರಡು ವರ್ಷ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದರು.
Comments are closed.