Mohan Lal: ಖ್ಯಾತ ನಟ ಮೋಹನ್ ಲಾಲ್ ಗೆ ‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ ಘೋಷಣೆ!!

Share the Article

Mohan Lal: ಕೇಂದ್ರ ಸರ್ಕಾರ ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಿದೆ.

ಈ ಕುರಿತಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾಹಿತಿ ನೀಡಿದ್ದು, ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶನಿವಾರ ಪ್ರಕಟಿಸಿದೆ.

ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಅಂದಹಾಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಭಾರತೀಯ ಚಿತ್ರರಂಗದಲ್ಲಿ ಅಸಾಧಾರಣ ಕೊಡುಗೆ ನೀಡಿದ ವ್ಯಕ್ತಿಗಳಿಗೆ ಭಾರತ ಸರ್ಕಾರವು ನೀಡುವ ಅತ್ಯುನ್ನತ ಜೀವಮಾನದ ಗೌರವವಾಗಿದೆ. 1969 ರಲ್ಲಿ ಸ್ಥಾಪಿತವಾದ ಈ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಪಿತಾಮಹ ಎಂದು ಕರೆಯಲಾಗುವ ದಾದಾಸಾಹೇಬ್ ಫಾಲ್ಕೆ ಅವರ ಹೆಸರಿನಲ್ಲಿ ನೀಡಲಾಗುತ್ತದೆ. ಈ ಪ್ರಶಸ್ತಿಯು ವಾರ್ಷಿಕವಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಸಮಾರಂಭದಲ್ಲಿ ನೀಡಲ್ಪಡುತ್ತದೆ. ಈ ಬಾರಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಖ್ಯಾತ ನಟ ಮೋಹನ್ ಲಾಲ್ ಆಯ್ಕೆಯಾಗಿದ್ದಾರೆ.

Comments are closed.