Maruti Suzuki : ಸೋಮವಾರದಿಂದ ಈ ಮಾರುತಿ ಕಾರು ಮಾರಾಟ ಆರಂಭ – 29 ಕಿ.ಮೀ ಮೈಲೇಜ್ ಕೊಡೋ ಈ ಕಾರು ಕೊಳ್ಳಲು ಮುಗಿ ಬಿದ್ದ ಜನ!!

Maruti Suzuki : ಇತ್ತೀಚೆಗೆ ನೂತನ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಮಿಡ್-ಸೈಜ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಇದೀಗ ಸೋಮವಾರದಿಂದ ಈ ಕಾರಿನ ಮಾರಾಟ ಆರಂಭವಾಗಲಿದೆ. ಈ ಕಾರಿನ ಫ್ಯೂಚರ್ಸ್ ನೋಡಿ ಇದೀಗ ಗ್ರಾಹಕರು ಕೊಳ್ಳಲು ಮುಗಿಬಿದ್ದು ನಿಂತಿದ್ದಾರೆ.

ಹೌದು, ಸುಜುಕಿ ವಿಕ್ಟೋರಿಸ್ (Maruti Suzuki Victoris) ಮಿಡ್-ಸೈಜ್ ಎಸ್‌ಯುವಿ ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದ್ದು, ಆಸಕ್ತ ಖರೀದಿದಾರರು ರೂ.11,000 ಮುಂಗಡ ಹಣ ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು ಇನ್ನು ಕಂಪನಿ ಹೇಳುತ್ತಿದ್ದಂತೆ ಜನತಾ ಮುಂದು ನಾ ಮುಂದು ಎಂದು ಬುಕ್ ಮಾಡಲು ಆರಂಭಿಸಿದ್ದಾರೆ. ಹೀಗಾಗಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಸಂಖ್ಯೆಯ ಗ್ರಾಹಕರು ಈ ಕಾರನ್ನು ಬುಕ್ ಮಾಡುತ್ತಿದ್ದಾರೆ.
ಈ ಕಾರು ಕನಿಷ್ಠ ರೂ.10.50 ಲಕ್ಷ ಹಾಗೂ ಗರಿಷ್ಠ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್‌ಎಕ್ಸ್‌ಐ, ವಿಎಕ್ಸ್‌ಐ, ಜಡ್‌ಎಕ್ಸ್‌ಐ, ಜಡ್‌ಎಕ್ಸ್‌ಐ (ಒ), ಜಡ್‌ಎಕ್ಸ್‌ಐ ಪ್ಲಸ್ ಮತ್ತು ಜಡ್‌ಎಕ್ಸ್‌ಐ (ಒ) ಪ್ಲಸ್ ಎಂಬ ರೂಪಾಂತರಗಳನ್ನು ಹೊಂದಿದೆ. ಇದು ಗ್ರ್ಯಾಂಡ್ ವಿಟಾರಾ ಕಾರಿನ ಪ್ಲಾಟ್‌ಫಾರ್ಮ್‌ನ್ನು ಆಧರಿಸಿದೆ. ಉತ್ತಮವಾದ ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಕನೆಕ್ಟ್ಡ್ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಾಗಿದೆ.
5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಇದು ಶಕ್ತಿಶಾಲಿಯಾದ ಮೂರು ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಮತ್ತು ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 21.06 ರಿಂದ 28.65 ಕಿ.ಮೀ ವರಗೆ ಮೈಲೇಜ್ ನೀಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 14.2 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಅಲ್ಲದೆ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಕೊಂಡಿದೆ. ಇದಕ್ಕೆ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಟಾಟಾ ಕರ್ವ್, ಹೋಂಡಾ ಎಲಿವೇಟ್ ಮತ್ತು ಟಾಟಾ ನೆಕ್ಸಾನ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
Comments are closed.