SIT: ಆಳಂದ ಫೈಲ್ಸ್ ಸೇರಿ ರಾಜ್ಯದ ಮತಗಳ್ಳತನ ಪ್ರಕರಣಗಳ ತನಿಖೆಗೆ SIT ರಚನೆ

Share the Article

SIT: ಕಲಬುರಗಿಯ ಆಳಂದ‌ ವಿಧಾನಸಭಾ ಕ್ಷೇತ್ರ (Aland Assembly Constituency) ಹಾಗೂ ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚನೆ ಮಾಡಿ ಆದೇಶ ಹೊರಡಿಸಿದೆ.

ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಬಿ.ಕೆ ಸಿಂಗ್‌ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ (SIT ) ರಚನೆ ಮಾಡಿದೆ. ಬಿಕೆ ಸಿಂಗ್‌ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರಲಿದ್ದಾರೆ. ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್‌ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ತಂಡದಲ್ಲಿ ಇರಲಿದ್ದಾರೆ.

ಇದನ್ನೂ ಓದಿ:ITR Filing: ಆದಾಯ ತೆರಿಗೆ ರಿಟರ್ನ್ ಸ್ಟೇಟಸ್ ತಿಳಿದುಕೊಳ್ಳುವುದು ಹೇಗೆ?

 

Comments are closed.