Dasara: ನಾಡಿನ ಜನತೆಗೆ `ದಸರಾ ಹಬ್ಬ’ದ ಶುಭಾಶಯ ಕೋರಿದ ಮುಖ್ಯಮಂತ್ರಿ ‘ಸಿದ್ದರಾಮಯ್ಯ’

Dasara: ನಾಡಿನ ಜನತೆಗೆ ನಾಡ ಹಬ್ಬ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಅವರು ದಸರಾ (Dasara) ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ಈ ಕುರಿತು ಟ್ವೀಟ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.


ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು.
ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. #MysuruDasara pic.twitter.com/9Uqjw30FYU— Siddaramaiah (@siddaramaiah) September 22, 2025
ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿಡಿಯೋ ದಲ್ಲಿ, ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.
ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.
ಇದನ್ನೂ ಓದಿ:Kadaba: ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಕಡಬದ 25 ರ ಹರೆಯದ ಯುವಕ ಹೃದಯಾಘಾತದಿಂದ ಸಾವು
ನಾಡಬಂಧುಗಳಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರುತ್ತಾ, ದಸರಾದ ಪೂರ್ವತಯಾರಿಗಳ ಕುರಿತ ಈ ಸುಂದರ ವೀಡಿಯೋವನ್ನು ನಿಮ್ಮೆದುರು ಇಡುತ್ತಿದ್ದೇವೆ. ನೋಡಿ, ಅನಿಸಿಕೆ ಹಂಚಿಕೊಳ್ಳಿ ಎಂದಿದ್ದಾರೆ.
Comments are closed.