Karnataka Gvt: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – ಅ. 1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸರ್ಕಾರ ಆದೇಶ!!

Share the Article

Karnataka Gvt: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಯನ್ನು ಅಕ್ಟೋಬರ್ 01, 2025 ರಿಂದ ಜಾರಿಗೆ ತರಲು ರಾಜ್ಯ ಸರ್ಕಾರ ಅದೇಶಿಸಿದೆ.

ಹೌದು, ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷೆಯ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಇನ್ನು ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸೇರಿದಂತೆ ಅಂದಾಜು 25 ಲಕ್ಷ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಯೋಜನೆಗಾಗಿ ಸರ್ಕಾರ ವಾರ್ಷಿಕ 500 ಕೋಟಿ ರೂ. ಅನುದಾನ ಕಾಯ್ದಿರಿಸಿದೆ ಎಂದು ಸಂಘ ತಿಳಿಸಿದೆ.

ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ಧಿಷ್ಟಪಡಿಸಿರುವ ವಂತಿಗೆಯನ್ನು ಅಕ್ಟೋಬರ್‌ನಿಂದ ನೀಡಬೇಕಾಗುತ್ತದೆ. ಪತಿ-ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವಂತಿಗೆಯನ್ನು ನೀಡಬೇಕಿದೆ.

ನೌಕರರ ವರ್ಗವಾರು ವಂತಿಗ ಕಡಿತ:

ಗ್ರೂಪ್ ಎ: ₹1,000

ಗ್ರೂಪ್ ಬಿ: ₹500

ಗ್ರೂಪ್ ಸಿ: ₹350

ಗ್ರೂಪ್ ಡಿ: ₹250

ಪಾವತಿ ವಿಧಾನ:

ಸರ್ಕಾರಿ ನೌಕರರ ವೇತನದಿಂದ ಕಡಿತಗೊಂಡ ವಂತಿಕೆಯನ್ನು ಎಲ್ಲ ಡಿಡಿಒಗಳು (ವೇತನ ವಿತರಣಾ ಅಧಿಕಾರಿಗಳು) ಖಜಾನೆ-2 ಮೂಲಕ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. ಬ್ಯಾಂಕ್ ಖಾತೆ ವಿವರಗಳನ್ನು ಎಚ್‌ಆರ್‌ಎಂಎಸ್ (HRMS) ಮೂಲಕ ಡಿಡಿಒಗಳಿಗೆ ತಿಳಿಸಲಾಗುವುದು.

ಪತಿ/ಪತ್ನಿ ಇಬ್ಬರೂ ನೌಕರರಾಗಿದ್ದರೆ:

ಸರ್ಕಾರಿ ನೌಕರನ ಪತಿ ಅಥವಾ ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಲ್ಲಿ, ಅವರಿಬ್ಬರಲ್ಲಿ ಒಬ್ಬರು ಮಾತ್ರ ವಂತಿಕೆ ಪಾವತಿಸುವ ಬಗ್ಗೆ ತಾವೇ ನಿರ್ಧರಿಸಿ, ಸಂಬಂಧಪಟ್ಟ ಡಿಡಿಒಗೆ ಮಾಹಿತಿ ನೀಡಬೇಕು.

ನಿಯೋಜಿತ ನೌಕರರು:

ಎಚ್‌ಆರ್‌ಎಂಎಸ್ ವ್ಯಾಪ್ತಿಯಲ್ಲಿ ಇಲ್ಲದ (ಇತರ ಇಲಾಖೆಗಳು, ಸಾರ್ವಜನಿಕ ಸಂಸ್ಥೆಗಳಲ್ಲಿ ನಿಯೋಜನೆ, ಅನ್ಯ ಸೇವೆ) ನೌಕರರು ತಮ್ಮ ಮಾಸಿಕ ವೇತನದಲ್ಲಿ ವಂತಿಕೆ ಕಡಿತಗೊಳಿಸಿ, ಸಂಸ್ಥೆಯಿಂದ ನೇರವಾಗಿ ಟ್ರಸ್ಟ್‌ನ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು.

ಇದನ್ನೂ ಓದಿ:SBI ಬ್ಯಾಂಕ್ ಕಡೆಯಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – 20 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಲು ಅವಕಾಶ!!

ಇನ್ನು ವಿವಾಹಿತ ಸರ್ಕಾರಿ ಮಹಿಳಾ ನೌಕರರ ತಂದೆ-ತಾಯಂದಿರೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನಿರ್ವಹಿಸಲಿದೆ ಎಂದು ಹೇಳಿದ್ದಾರೆ.

Comments are closed.