SL Byrappa: ಹಿರಿಯ ಸಾಹಿತಿ ಎಸ್‌ ಎಲ್‌ ಭೈರಪ್ಪ ನಿಧನ

Share the Article

SL Byrappa: ಹಿರಿಯ ಸಾಹಿತಿ ಎಸ್‌ ಎಲ್‌ ಭೈರಪ್ಪ (94) ಅವರು ವಯೋ ಸಹಜ ಖಾಯಿಲೆಯಿಂದ ಬೆಂಗಳೂರಿನಲ್ಲಿ ಇಂದು ನಿಧನ ಹೊಂದಿದ್ದಾರೆ.

ಎಸ್‌.ಎಲ್‌.ಭೈರಪ್ಪ ಅವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಇಂದು ನಿಧನ ಹೊಂದಿರುವುದಾಗಿ ಕುಟುಂಬದವರು ತಿಳಿಸಿರುವುದಾಗಿ ವರದಿಯಾಗಿದೆ.

1934 ರ ಜುಲೈ 26 ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದಲ್ಲಿ ಜನಿಸಿದರು.

ಇವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ.

ಪದ್ಮಭೂಷಣ (2023): ಭಾರತ ಸರ್ಕಾರದಿಂದ ನೀಡಲಾದ ದೊಡ್ಡ ಗೌರವ.

ಸರಸ್ವತೀ ಸಮ್ಮಾನ್ (2010): ತಮ್ಮ ‘ಮಂದ್ರ’ ಕಾದಂಬರಿಗೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975): ತಮ್ಮ ‘ದಾಟು’ ಕಾದಂಬರಿಗೆ.
ಸಾಹಿತ್ಯ ಅಕಾಡೆಮಿ ಫೆಲೋಶಿಪ್ (2015): ಅತ್ಯುನ್ನತ ಗೌರವ ಲಭಿಸಿದೆ.

ಪ್ರಮುಖ ಕೃತಿಗಳು:
ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಸಾರ್ಥ, ಮಂದ್ರ ಇತ್ಯಾದಿ ಕೃತಿಗಳನ್ನು ರಚಿಸಿದ್ದಾರೆ.

Comments are closed.