Karnataka: ‘ಅನುಕಂಪದ ಆಧಾರದಲ್ಲಿ ಹುದ್ದೆಗಳ ನೇಮಕಾತಿ’: ಸರ್ಕಾರದಿಂದ ಆದೇಶ

Share the Article

Karnataka: ರಾಜ್ಯದಲ್ಲಿ (Karnataka) ಅನುಕಂಪದ ಆಧಾರದ ಮೇಲೆ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವ ವಿಷಯದ ಹಿನ್ನಲೆ ಬೆಂಗಳೂರು (Bangalore) ಆಯುಕ್ತಾಯಲಯ ವ್ಯಾಪ್ತಿಯ ವಿಭಾಗೀಯ ಸಹ ನಿರ್ದೇಶಕರು ಹಾಗೂ ಜಿಲ್ಲಾ ಉಪನಿರ್ದೇಶಕರುಗಳ ಮುಖಾಂತರ ಅನುಕಂಪದ ಆಧಾರದ ಮೇಲೆ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಶಿಫಾರಸ್ಸು ಮಾಡಿ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಪರಿಗಣಿಸಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ನೇಮಕಾತಿ ಆದೇಶ ಹೊರಡಿಸುವ ಸಲುವಾಗಿ ಕೌನ್ಸಿಲಿಂಗ್ ಮುಖಾಂತರ ಸ್ಥಳ ನಿಯುಕ್ತಿಗೊಳಿಸಲು ತೀರ್ಮಾನಿಸಲಾಗಿದ್ದು, ದಿನಾಂಕ: 22-09-2025 ರಂದು ಬೆಳಿಗ್ಗೆ 11 ಗಂಟೆಗೆ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-560001 ಎಂಬಲ್ಲಿ ಕೌನ್ಸಿಲಿಂಗ್ ನಡೆಯಲಿದೆ.

ಇದನ್ನೂ ಓದಿ:Mangalore: ವಿದ್ಯುತ್‌ ಮಾರ್ಗ ಕಾಮಗಾರಿ: ಡಿ.15 ರವರೆಗೆ ಹಗಲು ರೈಲು ಇಲ್ಲ

ಅರ್ಜಿದಾರರು ಸ್ವತಃ ಇಲ್ಲಿ ಭೇಟಿ ನೀಡಿ ಕೌನ್ಸಿಲಿಂಗ್ ನಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ. ಅರ್ಜಿದಾರರು ಕೌನ್ಸಿಲಿಂಗ್ ಸಂದರ್ಭದಲ್ಲಿ ಅಂಗೀಕೃತ ಭಾವಚಿತ್ರ ಸಹಿತ ಗುರುತಿನ ಚೀಟಿ ಯನ್ನು ಹಾಜರುಪಡಿಸತಕ್ಕದ್ದು ಎಂದು ತಿಳಿಸಲಾಗಿದೆ.

Comments are closed.