SL Bhyrappa: ಮೈಸೂರಿನಲ್ಲಿ ಎಸ್.ಎಲ್ ಭೈರಪ್ಪ ಸ್ಮಾರಕ: ಸಿಎಂ ಘೋಷಣೆ

SL Bhyrappa: ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಮಂದಿರದಲ್ಲಿಂದು ಎಸ್.ಎಸ್ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭೈರಪ್ಪ ಅವರು ಬಹುಕಾಲ ಮೈಸೂರಿನಲ್ಲೇ ಕಾಲ ಕಳೆದದ್ದರಿಂದ ಅಲ್ಲೇ ಸ್ಮಾರಕ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.
“ಅವರು ಮೈಸೂರಿನಲ್ಲೇ(Mysore) ಹೆಚ್ಚು ಕಾಲ ಇದ್ದರು. ಹೈಸ್ಕೂಲ್‌ನಿಂದ (highschool) ಎಂಎ(MA) ವರೆಗಿನ ವಿದ್ಯಾಭ್ಯಾಸವನ್ನ ಮೈಸೂರಿನಲ್ಲೇ ಮಾಡಿದ್ದರು. ಮೈಸೂರು ಅವರ ಕರ್ಮಸ್ಥಳವಾಗಿದೆ. ಭೈರಪ್ಪನವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದಾರೆ. ಅವರ ಕಾದಂಬರಿಗಳು 40 ಭಾಷೆಗಳಿಗೆ ಭಾಷಾಂತರವಾಗಿದೆ. ಬಹುಷಃ ಇಷ್ಟು ಬರಹಳಿಗೆ ಭಾಷಾಂತರವಾಗಿದ್ದು ಅವರೊಬ್ಬರದ್ದೇ ಅನಿಸುತ್ತೆ” ಎಂದು ತಿಳಿಸಿದರು.
ಇದನ್ನೂ ಓದಿ:Karnataka: 39 ನಿಗಮ-ಮಂಡಳಿಗಳ ‘ಅಧ್ಯಕ್ಷರ’ ನೇಮಕ ಪಟ್ಟಿ ಪ್ರಕಟ
ಭೈರಪ್ಪನವರಿಗೆ ಚಿರಶಾಂತಿ ಕೋರುತ್ತ, ಕುಟುಂಬಸ್ಥರಿಗೆ ಹಾಗೂ ಅವರ ಅಭಿಮಾನಿಗಳಿಗೆ ಭೈರಪ್ಪ ಅವರ ಅಗಲಿಕೆಯ ದುಃಖ ಬರಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
Comments are closed.