Indian Railway: ಯಶವಂತಪುರ – ಮಂಗಳೂರು ನಡುವೆ ವಿಶೇಷ ರೈಲು ವ್ಯವಸ್ಥೆ

Share the Article

Indian Railway: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಂಗಳೂರು (Mangalore) ಜಂಕ್ಷನ್ ನಡುವೆ ಒಂದು ಟ್ರಿಪ್’ಗೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ.

ರೈಲು ಸಂಖ್ಯೆ 06257 ಯಶವಂತಪುರ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆ.30ರ ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ರೈಲು ಸಂಖ್ಯೆ 06258

ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಅ.1 ರಂದು ಮಧ್ಯಾಹ್ನ 2:35ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು, ಅದೇ ದಿನ ರಾತ್ರಿ 11:30 ಕ್ಕೆ ಯಶವಂತಪುರ ತಲುಪಲಿದೆ.

ಇದನ್ನೂ ಓದಿ:Samir Wankhede: ನೆಟ್‌ಫ್ಲಿಕ್ಸ್ ಸಿರೀಸ್‌, ಶಾರುಖ್‌ ಖಾನ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ಸಮೀರ್ ವಾಂಖೆಡೆ

ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು(puttur) ಮತ್ತು ಬಂಟ್ವಾಳ (Bantwala) ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದೆ. ಈ ರೈಲು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ ಎರಡು ಎಸಿ 2-ಟೈರ್, ಮೂರು ಎಸಿ 3-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ಎರಡನೇ ದರ್ಜೆ ಮತ್ತು ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

Comments are closed.