Geetha Shivarajkumar: ‘ಚುನಾವಣಾ ರಾಜಕೀಯ’ಕ್ಕೆ ನಿವೃತ್ತಿ ಘೋಷಿಸಿದ ‘ಗೀತಾ ಶಿವರಾಜ್ ಕುಮಾರ್’

Share the Article

Geetha Shivarajkumar: ಗೀತಾ ಶಿವರಾಜ್ ಕುಮಾರ್ ಅವರು “ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ” ಎಂಬುದಾಗಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ.

ಹೌದು, ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಗೀತಾ ಶಿವರಾಜ್ ಕುಮಾರ್ (Geetha Shivarajkumar) ಅವರು ” ನಾನು ಇನ್ನೂ ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ಯಾವಾಗ ಕರೆದರೂ ಬರುವುದಾಗಿ ತಿಳಿಸಿದರು.

ಇದನ್ನೂ ಓದಿ:Indian Railway: ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ

ಇನ್ನು ನೂತನ ಶಿವಮೊಗ್ಗ ಜಿಲ್ಲಾ ಮಹಿಳಾ (women) ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಅವರು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಅವರಿಗೆ ಈ ಹುದ್ದೆಯನ್ನು ನೀಡಿದ್ದು ಹರ್ಷತಂದಿದೆ. ನನ್ನ ಚುನಾವಣಾ ಪ್ರಚಾರದಲ್ಲೂ ಶ್ರಮಿಸಿದ್ದರು. ಅವರಿಗೆ ಅಭಿನಂದನೆ ತಿಳಿಸಿದರು.

Comments are closed.