Mandya: ಮದ್ದೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಕಲ್ಲು ತೂರಾಟ: ಪೂರ್ವನಿಯೋಜಿತ ಕೃತ್ಯ, ತನಿಖೆಯಲ್ಲಿ ಬಹಿರಂಗ

Mandya: ಮದ್ದೂರಿನಲ್ಲಿ ನಡೆದ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂದು ತನಿಖೆಯಲ್ಲಿ ಬಯಲಾಗಿದೆ.

ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 32 ಆರೋಪಿಗಳನ್ನು ಬಂಧನ ಮಾಡಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕಲ್ಲು ತೂರಾಟ ನಡೆಸಲು ಮೊದಲೇ ಪ್ಲ್ಯಾನ್ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ವರದಿಯಾಗಿದೆ.
ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಲಾಗಿದ್ದ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲು ಪೂರ್ವ ನಿಯೋಜನೆ ರೂಪಿಸಲಾಗಿತ್ತು. ಆದರೆ ಟಾರ್ಗೆಟ್ ಮಾಡಿಕೊಂಡಿದ್ದ ಗಣೇಶ ಮೆರವಣಿಗೆ ಬದಲಾಗಿ ಬೇರೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ತನಿಖೆಯಲ್ಲಿ ಬಯಲಾಗಿರುವ ಕುರಿತು ವರದಿಯಾಗಿದೆ.
ಇದನ್ನೂ ಓದಿ:TET: ಬಿಕಾಂ, ಎಂಕಾಂ ಪದವೀಧರರು TET ಮಾಡಿದ್ರೂ ನೇಮಕಾತಿಗೆ ಪರಿಗಣಿಸದ ಸರ್ಕಾರ
ಬಂಧಿತ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ಮಾಡುತ್ತಿದ್ದಾರೆ. ಗಲಭೆ ನಡೆಸಲು ಹುನ್ನಾರ ನಡೆಸಿದ್ದರೆ ಎನ್ನುವುದರ ಕುರಿತು ಕೂಡಾ ತನಿಖೆ ನಡೆಸಿದ್ದಾರೆ.
Comments are closed.