Hubballi: ಮಹಿಳೆಯರ ಒಳ ಉಡುಪು ಕದ್ದು ಪರಾರಿಯಾಗುತ್ತಿದ್ದ ವ್ಯಕ್ತಿ ಅರೆಸ್ಟ್

Hubballi: ಮಹಿಳೆಯರ ಒಳಉಡುಪುಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದ ಸೈಕೋಪಾತ್ ಓರ್ವನನ್ನು ಹುಬ್ಬಳ್ಳಿ ಪೊಲೀಸರು ಬಂಧನ ಮಾಡಿದ್ದಾರೆ.

ಮನೆಯ ಹೊರಗೆ ಬಟ್ಟೆ ಒಣಹಾಕಿದ್ದು, ಕಳ್ಳಬೆಕ್ಕಿನ ರೀತಿ ಬಂದು ಮಹಿಳೆಯರ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದು, ತನಿಖೆ ನಡೆಯುತ್ತಿದೆ.
Comments are closed.