Fake website Karnataka Temples: ದೇಗುಲಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ತೆರೆದು ಹಣ ವಂಚನೆ, ಇಬ್ಬರ ಬಂಧನ

Share the Article

Fake website Karnataka Temples: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿ ಹಲವು ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ತೆರೆದು ಭಕ್ತರಿಂದ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಣೆ ಮಾಡಿ ವಂಚನೆ ಮಾಡುತ್ತಿದ್ದ ತೆಲಂಗಾಣ ಮೂಲದ ಸಂದೀಪ್‌, ಅನಿಲ್‌ ಕುಮಾರ್‌ ಎಂಬುವವರನ್ನು ಚಿಕ್ಕಮಗಳೂರು ಸೆನ್‌ ಪೊಲೀಸ್‌ ಠಾಣೆಯ ಡಿವೈಎಸ್ಪಿ ನೇತೃತ್ವದ ತಂಡ ಬಂಧನ ಮಾಡಿದೆ.

ಇದನ್ನೂ ಓದಿ:Kasaragod: ರಾ.ಹೆದ್ದಾರಿ ಮಧ್ಯೆ ಟ್ಯಾಂಕರ್ ನಿಲ್ಲಿಸಿ ನಿದ್ದೆಗೆ ಜಾರಿದ ಆಸಾಮಿ

Www.Devaseva.com ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ತೆರೆದು, ಅದರಿಂದ ದೇಶದ, ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರು ಬಳಸಿ ಪ್ರಸಾದ, ಸೇವೆ, ವಿಶೇಷ ಪೂಜೆ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡಲಾಗಿದೆ.

Comments are closed.