Shakti Scheme: ಇನ್ನೊಂದು ವಿಶ್ವ ದಾಖಲೆಗೆ ಸೇರ್ಪಡೆಗೊಂಡ ರಾಜ್ಯ ಸರಕಾರದ ಶಕ್ತಿ ಯೋಜನೆ

Share the Article

Shakti Scheme: ಕರ್ನಾಟಕ ಸರಕಾರ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಹೊಸ ದಾಖಲೆ ಮಾಡಿದ್ದು, 500 ಕೋಟಿ ಮಹಿಳೆಯರ ಉಚಿತ ಪ್ರಯಾಣದ ಜೊತೆಗೆ ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ಸ್‌ ಹಾಗೂ ವರ್ಲ್ಡ್ಸ್‌ ರೆಕಾರ್ಡ್‌ ಆಫ್‌ ಎಕ್ಸಲೆನ್ಸ್‌ ಪ್ರಶಸ್ತಿಗೆ ಭಾಜನವಾಗಿದೆ.

ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಹಾಗೂ ಪ್ರಯಾಣಿಕರಿಗೆ ಸಚಿವ ರಾಮಲಿಂಗಾರೆಡ್ಡಿ ಧನ್ಯವಾದ ತಿಳಿಸಿದ್ದು, ಮಹಿಳಾ ಪ್ರಯಾಣಿಕರಿಗೆ ಕೂಡಾ ತಮ್ಮ ಧನ್ಯವಾದ ತಿಳಿಸಿದ್ದಾರೆ. ಶಕ್ತಿ ಯೋಜನೆ ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸಿದೆ. ಮಹಿಳೆಯನ್ನು ಆರ್ಥಿ, ಸಾಮಾಜಿಕ, ಔದ್ಯೋಗಿಕವಾಗಿ ಸಬಲರನನ್ನಾಗಿಸಿದ್ದು, ಇದೀಗ ಯೋಜನೆ ಮತ್ತೊಂದು ವಿಶ್ವದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆ ತಂದಿದೆ ಎಂದು ಹೇಳಿದರು.

ಇದನ್ನೂ ಓದಿ:Meter Readers: 3 ತಿಂಗಳ ಸರಾಸರಿ ಪರಿಗಣಿಸಿ ಗ್ರಾಹಕರಿಗೆ ಮುಂದಿನ ತಿಂಗಳು ವಿದ್ಯುತ್‌ ಬಿಲ್‌, ಮೀಟರ್‌ ರೀಡರುಗಳು ಬರಲ್ಲ

ಕೆಎಸ್‌ಆರ್‌ಟಿಸಿ ಕೂಡಾ ವಿಶ್ವದಾಖಲೆಗೆ ಸೇರಿದ ಶಕ್ತಿ ಯೋಜನೆ ಕುರಿತು ಮಾಹತಿ ನೀಡಿದೆ. ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರ 2023 ಜೂನ್‌ 11 ರಂದು ಪ್ರಾರಂಭಿಸಿದ್ದ ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿ ಮತ್ತು ಕೆಕೆ ಆರ್‌ಟಿಸಿ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಉಚಿತವಾಗಿ ಮಹಿಳೆಯರು 500 ಕೋಟಿ ರೂ. ಹೆಚ್ಚು ಪ್ರಯಾಣ ಮಾಡಿದ್ದಾರೆ ಎಂದು ತಿಳಿಸಿದೆ.

Comments are closed.