Karnataka Gvt: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಬಿಗ್ ಅಪ್ಡೇಟ್

Share the Article

Karnataka Gvt : ರಾಜ್ಯ ಸರ್ಕಾರಿ ನೌಕರರು ಬಹು ದಿನಗಳಿಂದ ಹಳೆ ಪಿಂಚಣಿ ಯೋಜನೆ ಕುರಿತು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಟ್ಟಿಭತ್ಯ ಕುರಿತು ಗುಡ್‌ ನ್ಯೂಸ್‌ ನೀಡಿದ್ದಾರೆ.

 

ಹೌದು, ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೋರೆ ಎನ್ನುವಂತೆ ಶೇ.3ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಿ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿ ಭತ್ಯೆ ಹೆಚ್ಚಳದ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ.

 

ಸರ್ಕಾರಿ ನೌಕರರ ತುಟ್ಟಿಭತ್ಯೆ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ ಎಂದರು.

Comments are closed.