GST ಪರಿಷ್ಕರಣೆ – ರಾಜ್ಯ ಸರ್ಕಾರಕ್ಕೆ ಆದ ನಷ್ಟವೆಷ್ಟು?

GST: ಕೇಂದ್ರ ಸರ್ಕಾರವು ಇತ್ತೀಚೆಗೆ ಜಿಎಸ್‌ಟಿ ಪರಿಷ್ಕರಣೆ ಮಾಡಿದ್ದು ಅದು ಕಳೆದ ಸೆಪ್ಟೆಂಬರ್ ತಿಂಗಳ 22 ರಿಂದ ಜಾರಿಗೆ ಬಂದಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಆಗಿರುವ ನಷ್ಟಗಳ ಕುರಿತು ಚರ್ಚೆಯಾಗುತ್ತಿದೆ.

ಇದೀಗ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಾಗಿ ಮಾತನಾಡಿದವರು 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ ಎಂದರು.
ಉತ್ತರಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ , ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು. ಆಯೋಗದ ಶಿಫಾರಸ್ಸಿನಂತೆ 5490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ 3000 ಕೋಟಿ, ರಸ್ತೆ ನಿರ್ಮಾಣಕ್ಕೆ 3000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೊಟಿ ರೂ.ಗಳ ಅನುದಾನವನ್ನು ನಮಗೆ ನೀಡಲಾಗಿಲ್ಲ. ಒಟ್ಟಾರೆ 17000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದರು.
Comments are closed.