Siddaramaiah: ‘NDRF ಅನುದಾನ’ವನ್ನು ‘ಗ್ಯಾರಂಟಿ ಯೋಜನೆ’ಗಳಿಗೆ ಬಳಸುತ್ತಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

Share the Article

Siddaramaiah: ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, “ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ” ಎಂದರು.

ಇದನ್ನೂ ಓದಿ;Hindu: ಹಿಂದು ಧರ್ಮದ ಈ ಸಂಕೇತಗಳ ಬಗ್ಗೆ ನಿಮಗೆ ಗೊತ್ತಾ?

Comments are closed.