T J S George: ಖ್ಯಾತ ಪತ್ರಕರ್ತ ಟಿಜೆಎಸ್ ಜಾರ್ಜ್ ನಿಧನ!

Share the Article

T J S George: ಓದುಗರನ್ನು ಯೋಚಿಸುವಂತೆ, ಪ್ರಶ್ನಿಸುವಂತೆ ಮತ್ತು ತೊಡಗಿಸಿಕೊಳ್ಳುವಂತೆ ಮಾಡಿದ ನಿಜವಾದ ಸಾರ್ವಜನಿಕ ಬುದ್ಧಿಜೀವಿಯಾಗಿದ್ದ ಖ್ಯಾತ ಪತ್ರಕರ್ತ, ಲೇಖಕ ಮತ್ತು ಅಂಕಣಕಾರ ಟಿ.ಜೆ.ಎಸ್. ಜಾರ್ಜ್(97) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

1928ರಲ್ಲಿ ಕೇರಳದಲ್ಲಿ ಜನಿಸಿದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇವರು ಸುಮಾರು 25. ವರ್ಷಗಳ ಕಾಲ ನಿರಂತರ ಅಂಕಣಕಾರರಾಗಿ ಸಾಮಾಜಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ದ ನಿರಂತರ ತಮ್ಮ ಲೇಖನಿ ಮೂಲಕ ಧ್ವನಿ ಎತ್ತುವ ಕೆಲಸ ಮಾಡಿದ್ದರು. ಅವರ ಅಗಲಿಕೆಯಿಂದ ಭಾರತೀಯ ಪತ್ರಿಕಾರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ.

ಇದನ್ನೂ ಓದಿ;Rashmika Mandanna: ರಶ್ಮಿಕಾ-ವಿಜಯ್‌ ದೇವರಕೊಂಡ ನಿಶ್ಚಿತಾರ್ಥ, ಫೆಬ್ರವರಿಯಲ್ಲಿ ಮದುವೆ

ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕೆ ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2011ರಲ್ಲಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿತ್ತು. ಪತ್ರಕರ್ತರಿಗೆ ಕೇರಳ ಸರ್ಕಾರ ನೀಡುವ ಅತೀ ದೊಡ್ಡ ಪುರಸ್ಕಾರ ಸ್ವದೇಶಾಭಿಮಾನಿ ಕೇಸರಿ ಪ್ರಶಸ್ತಿ 2019ರಲ್ಲಿ ಟಿ.ಜೆ.ಎಸ್‌. ಜಾರ್ಜ್‌ ಅವರನ್ನು ಅರಸಿಕೊಂಡು ಬಂದಿತ್ತು.

Comments are closed.