Trissur: ಆಸ್ತಿ ವಿವಾದ, ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಆತ್ಮಹತ್ಯೆ ಬೆದರಿಕೆ ಹಾಕಿದ ಮಗ

Trissur: ಮಗನೋರ್ವ ತಂದೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ನಡೆದಿದ್ದು, ನಂತರ ತಾನೂ ಆತ್ಮಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ.

ಆಸ್ತಿವಿಚಾರಕ್ಕೆ ಸಂಬಂಧಪಟ್ಟಂತೆ ತಂದೆ-ಮಗನ ಮಧ್ಯೆ ಆಗಾಗ ವಾಗ್ವಾದ ನಡೆಯುತ್ತಿತ್ತು. ತಂದೆಯ ಮೇಲೆ ಮಚ್ಚಿನಿಂದ ದಾಳಿ ನಡೆಸಿ, ಮನೆಯ ಬಾಗಿಲು ಹಾಕಿಕೊಂಡು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಪೊಲೀಸರು ಆತನನ್ನು 3 ಗಂಟೆಯ ನಂತರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಡಿಗೆ ಮನೆಯಲ್ಲಿ ವಾಸವಿರುವ ಇವರು ಈ ಘಟನೆ 1.30 ರ ಸುಮಾರಿಗೆ ನಡೆದಿದೆ. ತಂದೆ ಶಿವನ್ ಆಟೋಚಾಲಕರಾಗಿದ್ದು, ಆಸ್ತಿ ದಾಖಲೆ ಕುರಿತು ವಿಷಯ ಚರ್ಚೆ ಮಾಡಲು ತನ್ನ ಹೆಂಡತಿ ಜೊತೆ ಮಗನ ಮನೆಗೆ ಬಂದಿದ್ದರು. ವಿಷ್ಣು ತಾನು ಕಾಗದಗಳನ್ನು ಬಾವಿಗೆ ಎಸೆದಿದ್ದೇನೆ ಎಂದು ಹೇಳಿದ್ದರಿಂದ ಈ ಗಲಾಟೆ ನಡೆದಿದೆ. ಮಾತಿನ ಚಕಮಕಿ ನಂತರ ಹಿಂಸಾತ್ಮಕವಾಗಿ ಮಾರ್ಪಾಡಾಗಿದೆ.
ಪೊಲೀಸರು ಸ್ಥಳಕ್ಕ ಆಗಮಿಸಿದ್ದು, ಮಗ ಮನೆಯ ಮೊದಲ ಮಹಡಿಯಲ್ಲಿ ಬೀಗ ಹಾಕಿ ಆತ್ಮಹತ್ಯೆಗೆ ಯತ್ನ ಮಾಡುವುದಾಗಿ ಬೆದರಿಕೆ ಹಾಕಿದ್ದು, 5.30 ರ ಸುಮಾರಿಗೆ ಅವನನ್ನು ವಶಕ್ಕೆ ಪಡೆಯಲಾಗಿದೆ.
Caste Census: ಕೇಂದ್ರ ಸಚಿವ ವಿ ಸೋಮಣ್ಣ ಮನೆಗೆ ಬಂದ 9 ಮಂದಿ ಗಣತಿದಾರರು; ಸಚಿವರಿಂದ ಕ್ಲಾಸ್
ವಿಷ್ಣು ತನ್ನ ಹೆತ್ತವರಿಂದ ದೂರ ಇದ್ದು, ಮಾಟ ಮಂತ್ರಗಳನ್ನು ಮಾಡುತ್ತಿದ್ದ ಎಂದು ಸ್ಥಳೀಯರು ಆರೋಪ ಮಾಡಿದ್ದು, ಆತನನ್ನು ಪರೀಕ್ಷೆಗೆಂದು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ಕರೆದುಕೊಂಡು ಹೋಗಿದ್ದಾರೆ.
Comments are closed.