Election: ಬಿಹಾರ ಚುನಾವಣಾ ದಿನಾಂಕ ಪ್ರಕಟ: ಫಲಿತಾಂಶ ಯಾವಾಗ?

Election: ಬಿಹಾರ ವಿಧಾನಸಭಾ ಚುನಾವಣೆಗೆ (Election) ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.

ನವೆಂಬರ್ 6ರ ಗುರುವಾರ ಮೊದಲ ಹಂತ, ನವೆಂಬರ್ 11ರ ಮಂಗಳವಾರ 2ನೇ ಹಂತದಲ್ಲಿ ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ತಿಳಿಸಿದ್ದಾರೆ.
ಇದನ್ನೂ ಓದಿ:Gold prices: ಚಿನ್ನ ನೀ ಎಷ್ಟು ದುಬಾರಿ? ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ ಚಿನ್ನದ ಬೆಲೆ
ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. ಬಿಹಾರದಲ್ಲಿ ಒಟ್ಟು 7.43 ಕೋಟಿ ಮತದಾರರು ಇದ್ದಾರೆ. ಈ ಪೈಕಿ 3.92 ಕೋಟಿ ಪುರುಷ ಮತದಾರರು, 3.50 ಕೋಟಿ ಮಹಿಳಾ ಮತದಾರರು, 1,725 ತೃತೀಯಲಿಂಗಿ ಮತದಾರರಿದ್ದಾರೆ. 14.01 ಲಕ್ಷ ಫಸ್ಟ್ ಟೈಮ್ ವೋಟರ್ಸ್ ಇದ್ದಾರೆ. ಒಟ್ಟು 90,712 ಬೂತ್‌ಗಳನ್ನ ನಿರ್ಮಾಣ ಮಾಡಲಾಗಿದ್ದು, ನಗರದಲ್ಲಿ 13,911 ಹಾಗೂ ಗ್ರಾಮೀಣ ಭಾಗದಲ್ಲಿ 76,801 ಬೂತ್‌ಗಳಿರಲಿವೆ. ಎಲ್ಲಾ ಬೂತ್‌ಗಳಲ್ಲೂ ವೆಬ್‌ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
Comments are closed.