Police: ರಾಜ್ಯದ ‘ಪೊಲೀಸ್ ಸಿಬ್ಬಂದಿ’ಗಳಿಗೆ ‘ವಾರ್ಷಿಕ ಆರೋಗ್ಯ ತಪಾಸಣೆ ವೆಚ್ಚ’ ಹೆಚ್ಚಿಸಿ ಸರ್ಕಾರ ಆದೇಶ

Police: ರಾಜ್ಯದ ಪೊಲೀಸ್ (Police) ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ.


ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜರಲ್ ಆಫ್ ಪೊಲೀಸ್ ಅವರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ.



ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ.1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿದ್ದು, ಸದರಿ ಸರ್ಕಾರದ ಆದೇಶವನ್ನು ಸೂಕ್ತ ಕ್ರಮಕ್ಕಾಗಿ ಈಗಾಗಲೇ ಉಲ್ಲೇಖಿತ (4)ರ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ. ಆದರೆ ಇದಕ್ಕೆ ತಗಲುವ ವೆಚ್ಚವನ್ನು ಲೆಕ್ಕ ಶೀರ್ಷಿಕೆ 2055-00-001-0-01-021 (ವೈದ್ಯಕೀಯ ವೆಚ್ಚ ಮರುಪಾವತಿ)ಗಳ ಅಡಿಯಲ್ಲಿ ಭರಿಸತಕ್ಕದ್ದು ಎಂದು ನಮೂದಿಸಲಾಗಿರುತ್ತದೆ. ಆದರೆ ಸದರಿ ಲೆಕ್ಕ ಶೀರ್ಷಿಕೆ Direction & Administration ಅಡಿಯಲ್ಲಿರುವ ಘಟಕಗಳಿಗೆ ಮಾತ್ರ ಸಂಬಂಧಿಸಿದ್ದು, ಇತರ ಘಟಕಗಳು ಒಳಗೊಂಡಿರುವುದಿಲ್ಲ.
ಇದನ್ನೂ ಓದಿ:SSLC: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ 710 ರೂ.ವರೆಗೆ ಹೆಚ್ಚಳ
Comments are closed.