H D Devegowda: ಆಸ್ಪತ್ರೆಗೆ ದಾಖಲಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ : ವೈದ್ಯರು ಆರೋಗ್ಯದ ಬಗ್ಗೆ ಏನ್ ಹೇಳ್ತಾರೆ?

H D Devegowda: ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಚಿಕಿತ್ಸೆಗೆ ದೇವೇಗೌಡ ಅವರು ಸ್ಪಂದಿಸುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಟಿವಿ9 ಕನ್ನಡ ವರದಿ ಮಾಡಿದೆ.

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. “ಅವರ ಆರೋಗ್ಯದ ಪ್ರಗತಿಯನ್ನು ವೈದ್ಯಕೀಯ ತಜ್ಞರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ” ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ. ಈ ಸಂಬಂಧ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕುಟುಂಬದ ಮೂಲಗಳ ಪ್ರಕಾರ, 92 ವರ್ಷದ ಜೆಡಿ(ಎಸ್) ಮುಖ್ಯಸ್ಥರಿಗೆ ಜ್ವರ ಕಾಣಿಸಿಕೊಂಡಿದ್ದು , ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ರಾಜ್ಯಸಭೆ ಸಂಸದರಾಗಿರುವ 92 ವರ್ಷದ ಹೆಚ್‌ಡಿ ದೇವೇಗೌಡರು,ಈ ಬಾರಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ದೇವೇಗೌಡರ ಪುತ್ರ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ಸಚಿವರಾಗಿದ್ದಾರೆ.
Comments are closed.