Home News PM Modi: ಗುಜರಾತ್ ಮುಖ್ಯಮಂತ್ರಿಯಾದ ಮೊದಲ ದಿನದ ಫೋಟೋಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ

PM Modi: ಗುಜರಾತ್ ಮುಖ್ಯಮಂತ್ರಿಯಾದ ಮೊದಲ ದಿನದ ಫೋಟೋಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ

Hindu neighbor gifts plot of land

Hindu neighbour gifts land to Muslim journalist

PM Modi: 2001ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಾರ್ಷಿಕೋತ್ಸವದ ನೆನಪಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು X ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. “ಭಾರತೀಯರ ನಿರಂತರ ಆಶೀರ್ವಾದಗಳಿಗೆ ಧನ್ಯವಾದಗಳು. ನಾನು ಸರ್ಕಾರದ ಮುಖ್ಯಸ್ಥನಾಗಿ 25ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ” ಎಂದು ಅವರು ಬರೆದಿದ್ದಾರೆ.

ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಅಕ್ಟೋಬರ್ 7, 2001 ರ ಚಿತ್ರವನ್ನು ಹಂಚಿಕೊಂಡ ಪ್ರಧಾನಿ, ಸಾರ್ವಜನಿಕ ಸೇವೆಯಲ್ಲಿನ ತಮ್ಮ ಪ್ರಯಾಣವನ್ನು ನೆನಪಿಸಿಕೊಳ್ಳುತ್ತಾ ಭಾರತದ ಜನರಿಗೆ ಕೃತಜ್ಞತೆ ಸಲ್ಲಿಸಿದರು. “ಮೊದಲನೆಯದಾಗಿ, ಯಾವಾಗಲೂ ಬಡವರಿಗಾಗಿ ಕೆಲಸ ಮಾಡಬೇಕು, ಎರಡನೆಯದಾಗಿ, ಎಂದಿಗೂ ಲಂಚ ತೆಗೆಕೊಳ್ಳಬಾರದು ಎಂದು ತಾಯಿ ಹೇಳಿದ್ದರು” ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ;Cancer: ಹೊಸ ರಕ್ತ ಪರೀಕ್ಷೆಯಿಂದ ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಪತ್ತೆ: 10 ವರ್ಷ ಮೊದಲೇ ಪತ್ತೆಹಚ್ಚಲು ಸಾಧ್ಯ

“ಇಷ್ಟು ವರ್ಷಗಳಿಂದ, ನಮ್ಮ ಜನರ ಜೀವನವನ್ನು ಸುಧಾರಿಸುವುದು ಮತ್ತು ನಮ್ಮೆಲ್ಲರನ್ನೂ ಪೋಷಿಸಿದ ಈ ಮಹಾನ್ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದು ನನ್ನ ನಿರಂತರ ಪ್ರಯತ್ನವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು. ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಹಿಂದಿನ ನೆನಪುಗಳ ಜೊತೆಗೆ, ಪ್ರಧಾನಿ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಛಾಯಾಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ.