Koppala: ನಡುರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಹ*ತ್ಯೆ !!

Share the Article

Koppala: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ(31) ಹತ್ಯೆಯಾದವರು. ಗಂಗಾವತಿಯ ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಎರಡು ಗಂಟೆಗೆ ಕಾರ್ ನಲ್ಲಿ ಆಗಮಿಸಿದ್ದ ಆರೋಪಿಗಳು ವೆಂಕಟೇಶ್ ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ವೆಂಕಟೇಶ ಕುರುಬರ ದೇವಿಕ್ಯಾಂಪ್‌ನಿಂದ ಸ್ನೇಹಿತರೊಂದಿಗೆ ಊಟ ಮಾಡಿ ಬೈಕ್‌ನಲ್ಲಿ ಗಂಗಾವತಿಗೆ ತೆರಳುತ್ತಿದ್ದರು. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ಬೈಕ್‌ಗೆ ಗುದ್ದಿ ಅಡ್ಡಗಟ್ಟಿದ ಗುಂಪು, ಲಾಂಗ್ ಮತ್ತು ಮಚ್ಚುಗಳಿಂದ ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.

ಇದನ್ನೂ ಓದಿ;Bigg Boss-12: ‘ಬಿಗ್‌ ಬಾಸ್ ಮನೆಗೆ ಬೀಗ- ರಾಜಕೀಯಾವಾಗಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ರೆಸಾರ್ಟ್‌ಗೆ ಸ್ಪರ್ಧಿಗಳು ಶಿಫ್ಟ್ !!

ಗಂಗಾವತಿ ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments are closed.