Bigg Boss-12: ಬಿಗ್‌ಬಾಸ್‌ ಆರಂಭಕ್ಕೆ‌ ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಪತ್ರ – 10 ದಿನಗಳ ಕಾಲಾವಕಾಶ ನೀಡಿದ ಡಿಸಿ!!

Share the Article

Bigg Boss-12 : ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಬಿಗ್‌ ಬಾಸ್‌ ಕನ್ನಡ ಸೀಸನ್‌ -12 (Bigg Boss Kannada 12) ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಹಾಕಿದ್ದಾರೆ. ಇದೀಗ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳು 10 ದಿನಗಳ ಕಾಲಾವಕಾಶವನ್ನು ನೀಡಿದ್ದಾರೆ.

ಹೌದು, ಇಂದಷ್ಟೆ, ಜಾಲಿವುಡ್ ಸ್ಟುಡಿಯೋಸ್​​ನ ಮಾತೃ ಸಂಸ್ಥೆ ವೆಲ್ಸ್ ಸ್ಟುಡಿಯೋಸ್​​ನವರು ತಮ್ಮ ಅಮ್ಯೂಸ್​ಮೆಂಟ್ ಪಾರ್ಕ್ ಮತ್ತು ಸ್ಟುಡಿಯೋನಲ್ಲಿ ಇರುವ ಲೋಪಗಳನ್ನು ಸರಿಪಡಿಸಿಕೊಳ್ಳಲು ಹದಿನೈದು ದಿನಗಳ ಕಾಲಾವಕಾಶ ನೀಡಿರೆಂದು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ವೆಲ್ಸ್ ಸ್ಟುಡಿಯೋದ ಮನವಿಯನ್ನು ಮನ್ನಿಸಿರು ಜಿಲ್ಲಾಧಿಕಾರಿಗಳು ಹತ್ತು ದಿನಗಳ ಕಾಲಾವಕಾಶವನ್ನು ಸ್ಟುಡಿಯೋಗೆ ನೀಡಿದ್ದಾರೆ. ಇದೀಗ ಹತ್ತು ದಿನಗಳ ಕಾಲಾವಕಾಶ ಸಿಕ್ಕಿರುವ ಬೆನ್ನಲ್ಲೆ ಬಿಗ್​​ಬಾಸ್ ಶೋ ಮತ್ತೆ ಪ್ರಾರಂಭ ಆಗುವ ಸಾಧ್ಯತೆ ಇದೆ.

ಅಂದಹಾಗೆ ಎಲಾ ರೀತಿಯ ಪರವಾನಾಗಿ ಪಡೆದು ಶೋ ನಡೆಸುತ್ತೇವೆ. ನಮ್ಮ ಸ್ಟುಡಿಯೋನಲ್ಲಿನ ಎಲ್ಲ ಚಟುವಟಿಕೆಗಳಿಗೆ ಪರವಾನಗಿ ಇದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಇಲಾಖೆಯ ಕೆಲವು ನಿಯಮಗಳನ್ನು ನಾವು ಸರಿಯಾಗಿ ಪಾಲಿಸಿಲ್ಲ, ಈ ಬಗ್ಗೆ ನಾವು ವಿಷಾದ ವ್ಯಕ್ತಪಡಿಸುತ್ತೇವೆ. ಇನ್ನು ಮುಂದೆ ನಾವು ಕೆಎಸ್​​ಪಿಬಿಯ ಎಲ್ಲ ನಿಯಮಗಳನ್ನು ನಾವು ಪಾಲಿಸುತ್ತೇವೆ, ಅದಕ್ಕೆ ಸಂಬಂಧಿಸಿರುವ ದಾಖಲೆಗಳನ್ನು ನಾವು ಕೆಎಸ್​​ಪಿಬಿಗೆ ಸಲ್ಲಿಕೆ ಮಾಡುತ್ತೇವೆ. ನಮಗೆ 15 ದಿನಗಳ ಕಾಲಾವಕಾಶ ನೀಡಿ ಅಷ್ಟರಲ್ಲಿ ಎಲ್ಲವನ್ನು ಸರಿಪಡಿಸುತ್ತೇವೆ, ಸದ್ಯಕ್ಕೆ ನಮಗೆ ತಾತ್ಕಾಲಿಕ ಅನುಮತಿಯನ್ನು ನೀಡಿ, ಆ ನಂತರ ಪರಿಶೀಲನೆ ನಡೆಸಿ ಅನುಮತಿಯನ್ನು ನವೀಕರಣಗೊಳಿಸಿ ಎಂದು ಪತ್ರದಲ್ಲಿ ಹೇಳಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಜಿಲ್ಲಾಧಿಕಾರಿಗಳು 10 ದಿನಗಳ ರಿಲೀಫ್‌ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ:Export: 2025ರ ಮೊದಲಾರ್ಧದಲ್ಲಿ ಭಾರತದ ರಫ್ತು ಶೇ.4-5ರಷ್ಟು ಬೆಳವಣಿಗೆ – ಪಿಯೂಷ್‌ ಗೋಯಲ್

Comments are closed.