Crop Relief: ಮುಂಗಾರು ಬೆಳೆ ಹಾನಿ ಪರಿಹಾರ ಹಣ 10 ದಿನದಲ್ಲಿ ಬಿಡುಗಡೆ !! ಕೃಷಿ ಸಚಿವರಿಂದ ಘೋಷಣೆ

Share the Article

Crop Relief: ಮುಂಗಾರು ಮಳೆಯಿಂದ ಒಟ್ಟಾರೆ 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ ಆಗಿದ್ದು, 10 ದಿನದಲ್ಲಿ ಪರಿಹಾರ ಮೊತ್ತ ಬಿಡುಗಡೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮಂಗಳವಾರ ಬೆಳೆಹಾನಿ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಇತ್ತೀಚೆಗೆ ಹಾನಿಗೊಳಗಾದ ಸುಮಾರು 7.24 ಲಕ್ಷ ಹೆಕ್ಟೇರ್ ಬೆಳೆ ಹಾನಿ ಜಂಟಿ ಸಮೀಕ್ಷೆಯು ಪ್ರಗತಿಯಲ್ಲಿದ್ದು, 10 ದಿನಗಳಲ್ಲಿ ಬೆಳೆ ಹಾನಿ ಪರಿಹಾರ ಪಾವತಿ ಮಾಡಲಾಗುವುದು ಎಂದರು.

ದೇಶದಲ್ಲೇ ರಾಜ್ಯ ಸರ್ಕಾರವು ಸಂಪೂರ್ಣ ಪಾರದರ್ಶಕತೆಯೊಂದಿಗೆ ಆಧಾರ್ ಜೋಡಣೆ ಹೊಂದಿದ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಅತ್ಯಂತ ತ್ವರಿತ ಪಾವತಿ ವ್ಯವಸ್ಥೆಯೊಂದಿಗೆ ಬೆಳೆ ಹಾನಿ ಪರಿಹಾರ ಪಾವತಿ ಮಾಡಲಾಗುತ್ತಿದೆ.

ಇದನ್ನೂ ಓದಿ:Retirement age: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಏರಿಕೆ?

ರಾಜ್ಯದಲ್ಲಿ ಅತಿವೃಷ್ಠಿ ಮತ್ತು ಪ್ರವಾಹ ಪೀಡಿತ ಪ್ರದೇಶದ ರೈತರ ಬೆಳೆ ಹಾನಿ ಪರಿಹಾರ ಪಾವತಿಗಾಗಿ ಸುಮಾರು 2000 ಕೋಟಿ ರೂ. ಪಾವತಿ ಪ್ರಕ್ರಿಯೆಯು ಪ್ರಾರಂಭಿಸಲಾಗಿದ್ದು, ಇನ್ನು 30 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

Comments are closed.