Vidyasiri: ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – ಅರ್ಹತೆ, ಕೊನೆಯ ದಿನಾಂಕ ಕುರಿತು ಇಲ್ಲಿದೆ ಅಪ್ಡೇಟ್

Share the Article

Vidyasiri: ಕರ್ನಾಟಕ ಸರ್ಕಾರವು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಿದ್ದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೌದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸರ್ಕಾರಿ, ಅನುದಾನ ರಹಿತ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ವಿದ್ಯಾರ್ಥಿವೇತ ನೀಡಲಾಗುತ್ತಿದೆ. ಇದರ ಅಡಿಯಲ್ಲಿ ಪ್ರತಿ ತಿಂಗಳು 1,500 ರೂಪಾಯಿಯಂತೆ 10 ತಿಂಗಳವರೆಗೆ ಒಟ್ಟು 15 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಇದೀಗ ಈ ವಿದ್ಯಾರ್ಥಿ ವೇತನಕ್ಕೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾಸಿರಿ (Vidyasiri Scholarship 2025 Karnataka) ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಅರ್ಹತೆಗಳು ಏನೇನು?

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿರಬೇಕು. ಅವರ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಹಿಂದಿನ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿರಬೇಕು. ಗ್ರಾಮೀಣ ಪ್ರದೇಶವರು ಮಾತ್ರ ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ. ಖಾಸಗಿ ಹಾಸ್ಟೆಲ್, ಪಿಜಿಗಳಲ್ಲಿ ಉಳಿದುಕೊಂಡಿರುವವರು ಕೂಡ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ:IPL-2026 : RCB ಸಂಭಾವನೀಯ ಆಟಗಾರರ ಪಟ್ಟಿ ರಿಲೀಸ್ – ಕೆಲವರಿಗೆ ಕೋಕ್

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ssp.postmatric.karnataka.gov.in ಗೆ ಭೇಟಿ ನೀಡಬೇಕು ಲಾಗಿನ್ ಮಾಹಿತಿ ಒದಗಿಸಿ, ಹೊಸ ನೋಂದಣಿಯಾದರೆ ಅಗತ್ಯ ವಿವರಗಳನ್ನು ನೀಡಿ ರಿಜಿಸ್ಟರ್ ಮಾಡಿಕೊಳ್ಳಬೇಕು ವಿದ್ಯಾರ್ಥಿಗಳು ‘ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ’ ಮೇಲೆ ಕ್ಲಿಕ್ ಮಾಡಬೇಕು. ಶೈಕ್ಷಣಿಕ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಸೇರಿ ಅಗತ್ಯ ದಾಖಲೆಗಳನ್ನು ಒದಗಿಸಿ ಅರ್ಜಿ ಸಲ್ಲಿಸಬೇಕು.

Comments are closed.