Nobel Prize : ರಾಹುಲ್ ಗಾಂಧಿಗೆ ಸಿಗದ ನೊಬೆಲ್ ಶಾಂತಿ ಪ್ರಶಸ್ತಿ – ಪೋಸ್ಟ್ ಹಾಕಿ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್

Nobel Prize : ನೊಬೆಲ್ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರಿ ನಿರಾಸೆಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮೊಬೈಲ್ ಶಾಂತಿ ಪ್ರಶಸ್ತಿಯನ್ನು ನೀಡಿಲ್ಲವೆಂದು ಕಾಂಗ್ರೆಸ್ ನಾಯಕ ಅಸಮಾಧಾನವನ್ನು ವ್ಯಕ್ತಪಡಿಸಿ ಪೋಸ್ಟ್ ಒಂದನ್ನು ಹಾಕಿಕೊಂಡಿದ್ದಾರೆ.

ಇತ್ತೀಚಿಗೆ ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವದ ಹಕ್ಕುಗಳನ್ನು ಉತ್ತೇಜಿಸುವ ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸುವ ಅವರ ಹೋರಾಟಕ್ಕಾಗಿ ಮಾರಿಯಾ ಕೊರಿನಾ ಮಚಾಡೊ ಅವರಿಗೆ 2025 ರ ನೊಬೆಲ್ ಸಮಿತಿಯು ಪ್ರಶಸ್ತಿ ನೀಡಲಾಗಿದೆ. ಇದರ ಬೆನ್ನಲ್ಲೇ ಭಾರತದಲ್ಲಿ ಸಂವಿಧಾನದ ಉಳಿವಿಗೆ ಹೋರಾಡುತ್ತಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಈ ಪ್ರಶಸ್ತಿ ಸಂದಬೇಕಿತ್ತು ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಈ ಕುರಿತಾಗಿ ಪೋಸ್ಟ್ ಒಂದನ್ನು ಕೂಡ ಶೇರ್ ಮಾಡಿಕೊಂಡಿದ್ದಾರೆ.
ಪೋಸ್ಟ್ ನಲ್ಲಿ ಮಾರಿಯಾ ಕೊರಿನಾ ಮಚಾಡೋ (Maria Corina Machado) ಅವರು ಕೂಡ ಅಲ್ಲಿಯ ವಿಪಕ್ಷ ನಾಯಕಿ ಹಾಗೂ ಪ್ರಜಾಪ್ರಭುತ್ವಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಅವರಂತೆಯೇ ರಾಹುಲ್ ಗಾಂಧಿ ಕೂಡ ಭಾರತದಲ್ಲಿ ಅದನ್ನೇ ಮಾಡುತ್ತಿರುವುದಾಗಿ ಕಾಂಗ್ರೆಸ್ ವಕ್ತಾರ ಸುರೇಂದ್ರ ರಜಪೂತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಐದು ಬಾರಿ ಲೋಕಸಭಾ ಸಂಸದೆಯಾಗಿರುವ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾಡೋ ಮಚಾಡೋ ಅವರ ಜೊತೆಗೆ ಇರುವ ಚಿತ್ರವನ್ನು ಹಂಚಿಕೊಂಡ ಸುರೇಂದ್ರ ರಜಪೂತ್, ರಾಹುಲ್ ಗಾಂಧಿಯವರಿಗೂ ಈ ಪ್ರಶಸ್ತಿ ನೀಡಬೇಕಿದೆ ಎಂದು ಆಗ್ರಹಿಸಿದ್ದಾರೆ.
ಇದೀಗ ಈ ಪೋಸ್ಟ್ ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಕೈಯಲ್ಲಿ ಸದಾ ಸಂವಿಧಾನದ ಪುಸ್ತಕವನ್ನು ಹಿಡಿದುಕೊಂಡು ಓಡಾಡುತ್ತಿರುವ ರಾಹುಲ್ ಗಾಂಧಿ (Rahul Gandhi), ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿದ್ದಾರೆ. ಅವರನ್ನು ಮಚಾಡೋ ಜೊತೆ ಹೋಲಿಕೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಟೀಕಿಸಿದೆ.
Comments are closed.