Raju Talikote: ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ

Raju Talikote Passes Away: ಉತ್ತರ ಕರ್ನಾಟಕದ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ನಟ ರಾಜು ತಾಳಿಕೋಟೆ ಅವರು ಇಂದು ನಿಧನ ಹೊಂದಿದ್ದಾರೆ.

ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದು, ಹೃದಯಾಘಾತದ ಬೆನ್ನಲ್ಲೇ ಅವರನ್ನು ಉಡುಪಿಯ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿಧನ ಹೊಂದಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಂದಗಿ ಗ್ರಾಮದ ಮೂಲದವರು ರಾಜು ತಾಳಿಕೋಟೆ. ಇವರ ಮೊದಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟೆ. ಇವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಇವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
`ಖಾಸ್ಗತೇಶ್ವರ ನಾಟ್ಯ ಸಂಘ’ದ ಸಂಚಾಲಕರಾಗಿ ರಾಜ್ಯಾದಂತ್ಯ ಹಲವು ನಾಟಕಗಳಲ್ಲಿ ಇವರು ಅಭಿನಯ ಮಾಡಿದ್ದಾರೆ. ಮುಖ್ಯವಾಗಿ ಕುಡುಕರ ಜೀವನದ ಆಟೋಟೋಪಗಳನ್ನು ಹಾಸ್ಯವಾಗಿ ಚಿತ್ರಸಿದ `ಕಲಿಯುಗದ ಕುಡುಕ’ ನಾಟಕ ಮುಖಾಂತರ ತುಂಬಾ ಪ್ರಸಿದ್ಧಿ ಪಡೆದಿದ್ದರು.
ಇವರಿಗೆ ಇಬ್ಬರು ಹೆಂಡತಿಯರು. ಇಬ್ಬರ ಹೆಸರು ಕೂಡ ಪ್ರೇಮಾ. ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ ಕನ್ನಡ ಸೀಸನ್ 7 ರ ಸ್ಪರ್ಧಿಯಾಗಿ ಇವರು ಬಿಗ್ ಬಾಸ್ ಮನೆಯನ್ನು ಕೂಡಾ ಪ್ರವೇಶಿಸಿದ್ದರು.
ಇದನ್ನೂ ಓದಿ:Bhavani Revanna: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣ; ಭವಾನಿ ರೇವಣ್ಣಗೆ ಶಾಕಿಂಗ್ ನ್ಯೂಸ್
Comments are closed.