Karnataka Gvt: ಶಾಲೆಗಳಲ್ಲಿ ಇನ್ಮುಂದೆ ಅಡುಗೆಗೆ ಅಲ್ಯೂಮಿನಿಯಂ ಪಾತ್ರೆ ಬಳಸುವಂತಿಲ್ಲ

Share the Article

Karnataka Gvt : ರಾಜ್ಯ ಸರ್ಕಾರವು ಶಾಲಾ ಮಕ್ಕಳ ಹಿತ ದೃಷ್ಟಿಯಿಂದ ಹೊಸ ಆದೇಶವೊಂದನ್ನು ಹೊರಡಿಸಿದ್ದು ಇನ್ನು ಮುಂದೆ ಶಾಲೆಗಳಲ್ಲಿ ಅಡುಗೆಗೆ ಅಲ್ಯೂಮಿನಿಯಂ ಪಾತ್ರೆಯನ್ನು ಬಳಸುವಂತಿಲ್ಲ ಎಂದು ತಿಳಿಸಿದೆ.

ಹೌದು, ಮಧ್ಯಾಹ್ನದ ಉಪಾಹಾರ ಯೋಜನೆಯಡಿ ಶಾಲೆಗಳಲ್ಲಿ ಆಹಾರವನ್ನು ತಯಾರಿಸುವಾಗ ಅಲ್ಯುಮಿನಿಯಂ ಪಾತ್ರೆಗಳನ್ನು ದೀರ್ಘಾವಧಿಯಲ್ಲಿ ಬಳಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಬಳಸಲಾಗುತ್ತಿರುವ ಅಲ್ಯುಮಿನಿಯಂ ಪಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸುವತ್ತ ರಾಜ್ಯ ಸರಕಾರ ದೃಢ ಹೆಜ್ಜೆಯಿಟ್ಟಿದ್ದು, ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ.

ಇದನ್ನೂ ಓದಿ;Alcohol: ಕರ್ನಾಟಕದಲ್ಲಿ ಮದ್ಯ ಮಾರಾಟ ಸಂಪೂರ್ಣ ಕುಸಿತ – ಹೀಗಿದೆ ನೋಡಿ ಕಾರಣ

ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋ.ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು ಸೂಚಿಸಿದೆ.

Comments are closed.