Pratap Simha: ನೆಹರು ಕೈಯಲ್ಲೇ ಆರ್‌ಎಸ್‌ಎಸ್ ಬ್ಯಾನ್ ಮಾಡಲು ಆಗಿಲ್ಲ, ಇನ್ನು ಅವರ ಮರಿಮೊಮ್ಮಗಳ ಹೆಸರು ಇಟ್ಟುಕೊಂಡಿರುವ ನಿಮ್ಮಿಂದ ಸಾಧ್ಯವೇ?-ಪ್ರತಾಪ್ ಸಿಂಹ

Pratap Simha: ಆರ್.ಎಸ್.ಎಸ್ ನಿಷೇಧ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದ ಕುರಿತು ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ರೀತಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನೆಹರು ಕೈಯಲ್ಲಿಯೇ ಆರ್‌ಎಸ್‌ಎಸ್ ನಿಷೇಧ ಮಾಡಲು ಆಗಲಿಲ್ಲ. ಇನ್ನು ನಿಮ್ಮಿಂದ ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಪ್ರಿಯಾಂಕ್ ಖರ್ಗೆ ಅವರೇ ಆರ್‌ಎಸ್‌ಎಸ್ ಬ್ಯಾನ್ ಮಾಡುವ ವಿಚಾರವನ್ನು ಮರೆತುಬಿಡಿ. ನೆಹರು ಕೈಯಲ್ಲೇ ಆಗಿಲ್ಲ. ಇನ್ನು ಅವರ ಮರಿ ಮೊಮ್ಮಗಳ ಹೆಸರು ಇಟ್ಟುಕೊಂಡಿರುವ ನಿಮ್ಮ ಕೈಯಲ್ಲಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Comments are closed.