Kantara -1: ಕನ್ನಡಕ್ಕಿಂತಲೂ ಹಿಂದಿಯಲ್ಲಿ ಹೆಚ್ಚು ಗಳಿಕೆ ಮಾಡಿದ ಕಾಂತಾರ-1 !!

Share the Article

 

Kantara-1: ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿರುವ ಕಾಂತರಾ ಚಾಪ್ಟರ್ 1 ಸಿನಿಮಾ ಅಬ್ಬರದ ಪ್ರದರ್ಶನ ಕಾಣುತ್ತಿದೆ. ಭಾರತ ಚಿತ್ರರಂಗದ ಹಲವು ಚಿತ್ರಗಳ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ. ದಿನದಿನವೂ ಚಿತ್ರದ ಕಲೆಕ್ಷನ್ ಹೆಚ್ಚಾಗುತ್ತಿದೆಯೇ ಹೊರತು ತಟಸ್ಥ ಕಾಯ್ದುಕೊಳ್ಳುತ್ತಿಲ್ಲ. ಇದರ ನಡುವೆ ‘ಕಾಂತರಾ ಚಾಪ್ಟರ್ -1’ ಸಿನಿಮಾ ಕನ್ನಡಕ್ಕಿಂತಲೂ ಹೆಚ್ಚಾಗಿ ಹಿಂದಿಯಲ್ಲಿಯೇ ಹೆಚ್ಚು ಗಳಿಕೆ ಮಾಡಿದೆ ಎಂಬ ವಿಚಾರ ಬಹಿರಂಗಗೊಂಡಿದೆ.

 

ಹೌದು, ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರದ ಕಲೆಕ್ಷನ್ 700 ಕೋಟಿ ರೂಪಾಯಿ ಸಮೀಪಿಸಿದೆ ಅನ್ನೋದು ವಿಶೇಷ.  12 ದಿನದ ಗಳಿಕೆಯೂ ಸೇರಿದರೆ ಒಟ್ಟಾರೆ ಕಲೆಕ್ಷನ್ 700 ಕೋಟಿ ರೂಪಾಯಿ ಸಮೀಪಿಸಲಿದೆ. ಭಾರತದಲ್ಲಿ ಈ ಚಿತ್ರದ ಗಳಿಕೆ 438 ಕೋಟಿ ರೂಪಾಯಿ ಆಗಿದೆ. ಕನ್ನಡದಲ್ಲಿ 138 ಕೋಟಿ ರೂಪಾಯಿ ಗಳಿಕೆ ಆದರೆ, ಹಿಂದಿಯಲ್ಲಿ 144.5 ಕೋಟಿ ರೂಪಾಯಿ ಹರಿದು ಬಂದಿದೆ.

 

ಅಂದಹಾಗೆ ಹಿಂದಿ ಪ್ರೇಕ್ಷಕರ ಸಂಖ್ಯೆ ತುಂಬಾನೇ ದೊಡ್ಡದಿದೆ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಸಿನಿಮಾ ಹಿಂದಿ ಭಾಗದಲ್ಲಿ ಹೆಚ್ಚಿನ ಕಲೆಕ್ಷನ್ ಮಾಡಿದೆ.

Comments are closed.