Bihar Elections 2025: ಬಿಜೆಪಿಯ 101 ಅಭ್ಯರ್ಥಿಗಳ ಪಟ್ಟಿ ಪ್ರಕಟ

Bihar Elections 2025: ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಒಟ್ಟಾರೆ 3 ಹಂತಗಳಲ್ಲಿ 101 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ.

ಬಿಜೆಪಿ ಮೊದಲ ಪಟ್ಟಿಯಲ್ಲಿ 71 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. 2ನೇ ಪಟ್ಟಿಯಲ್ಲಿ 12 ಹಾಗೂ 3ನೇ ಪಟ್ಟಿಯಲ್ಲಿ 18 ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಖ್ಯಾತ ಗಾಯಕಿ ಮೈಥಿಲಿ ಠಾಕೂರ್ (Maithili Thakur)ರಿಗೆ ಆಲಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಬಿಜೆಪಿ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 17 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಇನ್ನೂ ಜೆಡಿಯು ಕೂಡ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಉಳಿದಂತೆ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿ 29, ಎಚ್ಎಎಂ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.
ಈ ಬಾರಿ ಬಿಹಾರದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 6ರಂದು ಮೊದಲ ಹಾಗೂ ನವೆಂಬರ್ 11 ರಂದು 2ನೇ ಹಂತದ ಮತದಾನ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ.
Comments are closed.