Pakistan : ಪಾಕಿಸ್ತಾನದಿಂದ ವೈಮಾನಿಕ ದಾಳಿ – ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು !!

Pakistan : ಪಾಕಿಸ್ಥಾನದ ಮಿಲಿಟರಿ ಪಕ್ಟಿಕಾ ಪ್ರಾಂತ್ಯದಲ್ಲಿ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ದೇಶೀಯ ಕ್ರಿಕೆಟಿಗರು ಸಾವನ್ನಪ್ಪಿದ್ದಾರೆ.

ಹೌದು, ಟೊಲೊ ನ್ಯೂಸ್ ಪ್ರಕಾರ, ಪಾಕಿಸ್ತಾನ ಸೇನೆಯು ಪಕ್ತಿಕಾ ಪ್ರಾಂತ್ಯದ ಅರ್ಗುನ್ ಮತ್ತು ಬರ್ಮಲ್ ಜಿಲ್ಲೆಗಳಲ್ಲಿ ವೈಮಾನಿಕ ದಾಳಿ ನಡೆಸಿದೆ. ಸುದ್ದಿ ಸಂಸ್ಥೆ ಎಎಫ್ ಪಿ ಪ್ರಕಾರ, ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಹತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 12 ಜನರು ಗಾಯಗೊಂಡಿದ್ದಾರೆ. ಅಲ್ಲದೆ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ.
ಪಾಕ್ ದಾಳಿಯಿಂದಾಗಿ ಸಾವನ್ಯಪ್ಪಿದ ಕ್ರಿಕೆಟಿಗರನ್ನು ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ. ಇದೀಗ ಈ ದಾಳಿ ವಿರುದ್ಧ ಅಫ್ಘಾನಿಸ್ತಾನ್ ಕ್ರಿಕೆಟಿಗರು ಧ್ವನಿಯೆತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ.
ಇನ್ನೂ “ಪಾಕಿಸ್ತಾನ ಆಡಳಿತವು ನಡೆಸಿದ ಹೇಡಿತನದ ದಾಳಿಯಲ್ಲಿ ಇಂದು ಸಂಜೆ ಗುರಿಯಾಗಿಸಿಕೊಂಡ ಪಕ್ತಿಕ ಪ್ರಾಂತ್ಯದ ಉರ್ಗುನ್ ಜಿಲ್ಲೆಯ ವೀರ ಕ್ರಿಕೆಟಿಗರ ದುರಂತ ಹುತಾತ್ಮರ ಬಗ್ಗೆ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತೀವ್ರ ದುಃಖ ಮತ್ತು ದುಃಖವನ್ನು ವ್ಯಕ್ತಪಡಿಸಿದೆ” ಎಂದು ಎಸಿಬಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
Comments are closed.