Teachers Recruitment: ಕರ್ನಾಟಕದಲ್ಲಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸುಪ್ರೀಂ ಆದೇಶ

Share the Article

Teachers Recruitment: ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ರಾಜ್ಯಸರಕಾರಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಒಟ್ಟು 13,352 ಶಾಲಾ ಶಿಕ್ಷಕರ ಹುದ್ದೆಯ ಪ್ರಕ್ರಿಯೆಯನ್ನು ಮುಂದುವರಿಸಲು ಅನುಮತಿ ನೀಡಲಾಗಿದೆ.

ಹಿಂದಿನ ಹೈಕೋರ್ಟ್‌ ಆದೇಶವನ್ನು ಪ್ರಶ್ನೆ ಮಾಡಿ ಸಲ್ಲಿಕೆ ಮಾಡಲಾದ ವಿಶೇಷ ರಜೆ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ವಿಜಯ್‌ ಬಿಷ್ಣೋಯ್‌ ಅವರ ಪೀಠ ವಿಚಾರಣೆ ಮಾಡಿದೆ.

ನೇಮಕಾತಿ ಪ್ರಕ್ರಿಯೆಯಿಂದ ಉಂಟಾಗುವ ಯಾವುದೇ ಸೇವಾ ಸಂಬಂಧಿತ ದೂರುಗಳನ್ನು ಪರಿಹಾರಕ್ಕಾಗಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಗೆ ಕೊಂಡೊಯ್ಯಲು ನ್ಯಾಯಾಲಯ ಹೇಳಿದೆ.

Comments are closed.