ರಾಜ್ಯದ ಶಾಲೆಗಳ ಮಾನ್ಯತೆ ನವೀಕರಣ RTE ನಿಯಮದಡಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

Share the Article

Education Department: ಖಾಸಗಿ ಅನುದಾನಿತ/ಅನುದಾನರಹಿತ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣವನ್ನು ಕರ್ನಾಟಕ ಶಿಕ್ಷಣ ಕಾಯ್ದೆ-1983 ಮತ್ತು ಆರ್‌.ಟಿ.ಇ ನಿಯಮ -2012 ರ ಅಡಿಯಲ್ಲಿ ನೀಡುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2025-26 ನೇ ಶೈಕ್ಷಣಿಕ ಸಾಲಿಗೆ ನೋಂದಣಿ ಪಡೆದು ಶಾಲೆಯನ್ನು ಪ್ರಾರಂಭ ಮಾಡುವ ಎಲ್ಲಾ ಶಾಲೆಗಳು ತಂತ್ರಾಂಶದ ಮೂಲಕ ನಿಯಮಾನುಸಾರ ನಿಗದಿ ಮಾಡಿರುವ ದಾಖಲೆ/ಮಾಹಿತಿಗಳನ್ನು ಸಲ್ಲಿಸಿ ಪ್ರಥಮ ಮಾನ್ಯತೆಗೆ ಆನ್ಲೈನ್‌ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯವಾಗಿರುತ್ತದೆ.

ಯಾವುದೇ ಶಾಲೆಯು ನಿಗದಿತ ಅವಧಿಯೊಳಗೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಿ ನಿಯಮಾನುಸಾರ ಮಾನ್ಯತೆ ಪಡೆಯದಿದ್ದಲ್ಲಿ ಶಾಲಾ ನೋಂದಣಿ ಪ್ರಮಾಣಪತ್ರದ ಷರತ್ತಿನಂತೆ ಶಾಲಾ ನೋಂದಣಿಯ ತಂತಾನೆ ರದ್ದಾಗುತ್ತದೆ.

ಶಾಲೆಯು ನೋಂದಣಿ ಮಾಡುವಾಗ ಆನ್ಲೈನ ಮೂಲಕ ಸಲ್ಲಿಸಿದ ದಾಖಲೆಗಳ ಪ್ರಕಾರ ತಂತಾನೆ ಪ್ರಥಮ ಮಾನ್ಯತೆ ಅರ್ಜಿಯಲ್ಲಿ ಸೆಳೆಯಲ್ಪಡುತ್ತದೆ. ಉಳಿದ ಮಾಹಿತಿ/ದಾಖಲೆಗಳನ್ನು ಮತ್ತು ವಾಯಿದೆ ಮುಗಿದ ಪ್ರಕರಣಗಳಲ್ಲಿ ಇತ್ತೀಚಿನ ದಿನಾಂಕಕ್ಕೆ ಚಾಲ್ತಿಯಲ್ಲಿರುವ ದಾಖಲೆಗಳನ್ನು ಅರ್ಜಿ ಸಲ್ಲಿಸಲು ಸೂಚಿಸಿದೆ.

Comments are closed.