ಗೋ ಸಾಗಾಟ ಕಂಟೇನರ್ ಮುಗುಚಿ 8 ಗೋವುಗಳು ಸಾವು

Tragic Accident: ಗೋವುಗಳನ್ನು ಸಾಗಿಸುತ್ತಿದ್ದ ಕಂಟೇನರ್ ವಾಹನವೊಂದು ಮಗುಚಿ ಬಿದ್ದು 8 ಗೋವುಗಳು ಸಾವಿಗೀಡಾದ ಘಟನೆ ನಡೆದಿದೆ. ಈ ಘಟನೆ ಕೊಪ್ಪಳ ರಾಷ್ಟ್ರೀಯ ಹೆದ್ದಾರಿಯ ಹಿಟ್ನಾಳ ಬಳಿ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಘಟನೆಯಲ್ಲಿ 8 ಗೋವುಗಳು ಸಾವಿಗೀಡಾಗಿದ್ದು, ಮಹಾರಾಷ್ಟ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನರ್ನಲ್ಲಿ ಸುಮಾರು 34 ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂದು ವರದಿಯಾಗಿದೆ. ಘಟನೆ ನಡೆದ ಬಳಿಕ ಕಂಟೇನರ್ ಚಾಲಕ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದು, ತನಿಖೆ ಆರಂಭಿಸಿದ್ದಾರೆ. ಗೋವುಗಳ ಸಾಗಾಟದ ಸಂದರ್ಭದಲ್ಲಿ ಸೂಕ್ತ ಕಾಳಜಿ ವಹಸದಿರುವುದು, ರಸ್ತೆ ನಿಯಮ ಪಾಲಿಸದಿರುವುದು ಈ ದುರಂತಕ್ಕೆ ಕಾರಣವಿರಬಹುದು ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
Comments are closed.