NOC: ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ 15 ದಿನಗಳಲ್ಲೇ ಸಿಗಲಿದೆ `ಇ-ಸ್ವತ್ತು’

Share the Article

NOC: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು. ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ. ನಿಯಮಗಳಂತೆ ಹದಿನೈದು ದಿನಗಳೊಳಗಾಗಿ ತಂತ್ರಾಂಶದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತಂದು ಗ್ರಾಮೀಣ ಜನರಿಗೆ ಸೌಲಭ್ಯವನ್ನು ಒದಗಿಸಲಾಗುವುದು.

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಾಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

Comments are closed.