Love Jihad: ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್: ಪ್ರೀತಿಸಿ, ಮದುವೆಯಾಗ್ತೀನಿ ಅಂತ ಇನ್ನೊಬ್ಬಳ ಜೊತೆ ಎಂಗೇಜ್

Share the Article

Love Jihad: ಬೆಂಗಳೂರಲ್ಲಿ ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಪ್ರೀತಿಸಿ, ಮದುವೆಯಾಗ್ತೀನಿ ಎಂದು ನಂಬಿಸಿ ಹಿಂದೂ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಘಟನೆ ನಡೆದಿದೆ.

ಆರೋಪಿಯನ್ನು ಮೊಹಮದ್ ಇಶಾಕ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಸಂತ್ರಸ್ತ ಯುವತಿ ಹೆಚ್‌ಎಸ್‌ಆರ್ (HSR Layout) ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂತ್ರಸ್ತ ಯುವತಿ ಹಾಗೂ ಆರೋಪಿ ಇಶಾಕ್ 2024ರ ಅ.17ರಂದು ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಅಲ್ಲಿಂದ ಸ್ನೇಹ ಬೆಳೆದು, ಪ್ರೀತಿ ಶುರುವಾಗಿತ್ತು. ಬಳಿಕ ಅ.30ರಂದು ಥಣಿಸಂದ್ರದ ಮಾಲ್‌ನಲ್ಲಿ ಇಬ್ಬರು ಮೊದಲ ಬಾರಿ ಭೇಟಿಯಾಗಿದ್ದರು. ಆ ನಂತರ ಮದುವೆ ಆಗ್ತೀನಿ ಎಂದು ನಂಬಿಸಿ ಹಲವು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದ.

ಆದ್ರೆ ಆ ಬಳಿಕ 2025ರ ಸೆ.14ರಂದು ಆರೋಪಿ ಇಶಾಕ್ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದ. ವಿಷಯ ತಿಳಿದ ಯುವತಿ ಆತನನ್ನು ಪ್ರಶ್ನೆ ಮಾಡಿದಾಗ, ನಿನ್ನ ದಾರಿ ನೀನು ನೋಡ್ಕೋ ಎಂದು ಹೇಳಿದ್ದ ಅಂತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಂತರ ನಾನು ಆತ್ಮಹತ್ಯೆಗೂ ಯತ್ನಿಸಿದ್ದೆ, ಆಗ ಆತನ ಪೋಷಕರು ಕರೆ ಮಾಡಿ, ಅವನನ್ನು ಮದುವೆಯಾಗಬೇಕು ಅಂದ್ರೆ ಮುಸ್ಲಿಂಗೆ ಮತಾಂತರ ಆಗಬೇಕು ಎಂದು ಕಂಡೀಷನ್ ಹಾಕಿದ್ದರು. ಈಗ ನನಗೆ ಮೋಸ ಮಾಡಿದ್ದಾನೆ ಎಂದು ಯುವತಿ ನೋವು ತೋಡಿಕೊಂಡಿದ್ದಾಳೆ.

Comments are closed.