CM: ಕಂದಾಯ, ಬಿಡಿಎ ಸೇರಿ ವಿವಿಧ ಇಲಾಖೆಗಳ ಇನ್ನೂ 29 ಸೇವೆಗಳು ಏಕಗವಾಕ್ಷಿಗೆ ಸೇರ್ಪಡೆ-ಸಿಎಂ ಘೋಷಣೆ

Share the Article

C M Siddaramaiah: ಏಕಗವಾಕ್ಷಿಗೆ ವಿವಿಧ ಇಲಾಖೆಗಳ ಇನ್ನೂ 29 ಸೇವೆಗಳನ್ನು ಸೇರ್ಪಡೆ ಮಾಡಲಾಗುವುದು, ಹೂಡಿಕೆ ಯೋಜನೆಗಳಿಗೆ ಸಂಬಂಧಿಸಿದ ಲೈಸೆನ್ಸ್‌ ನೀಡಿಕೆಗೆ ಕಾಲಮಿತಿ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಬಿಡಿಎ, ಕಂದಾಯ, ಅಗ್ನಿಶಾಮಕ, ಔಷಧ ನಿಯಂತ್ರಣ ಸೇರಿದಂತೆ ವಿವಿಧ ಇಲಾಖೆಗಳ ಇನ್ನು 29 ಸೇವೆಗಳನ್ನು ಶೀಘ್ರದ ಏಕಗವಾಕ್ಷಿಯಡಿ ತರಲಾಗುವುದು ಎಂದು ಹೇಳಿದ್ದಾರೆ.

ಏಕಗವಾಕ್ಷಿ ಪೋರ್ಟಲ್‌ ನಡಿ ಇಪ್ಪತ್ತು ಇಲಾಖೆಗಳ 115 ಸೇವೆಗಳನ್ನು ತರಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆಯಿಂದ ಅನುಮೋದನೆ ಪ್ರಕ್ರಿಯೆ ವಿಳಂಬವಾಗುತ್ತಿದೆ ಎನ್ನುವ ಮಾತುಗಳಿವೆ. ಮುದ್ರಾಂಕ ಮತ್ತು ನೋಂದಣಿ, ಮಾಲಿನ್ಯ ನಿಯಂತ್ರಣ ಮಂಡಳಿ, ಕಾರ್ಮಿಕ ಇಲಾಖೆ, ಅಗ್ನಿಶಾಮಕ, ಕಂದಾಯ, ಔಷಧ ನಿಯಂತ್ರಣ, ಕೆಐಎಡಿಬಿ, ಬಿಡಿಎ ಮೊದಲಾದ ಇಲಾಖೆಗಳ ಇನ್ನೂ 29 ಸೇವೆಗಳನ್ನು ಏಕಗವಾಕ್ಷಿ ಅಡಿ ತರಲಾಗುವುದು.

ಹೂಡಿಕೆ ಯೋಜನೆಗಳಿಗೆ ಸಂಬಂಧಪಟ್ಟಂತೆ ಕಡಿಮೆ ಕಾಲಮಿತಿಯಲ್ಲಿ ಸೇವೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಕುರಿತು ವರದಿಯಾಗಿದೆ.

Comments are closed.