Cylinder Blast: ಬೆಂಗಳೂರು: ಸಿಲಿಂಡರ್ ಸ್ಫೋಟ: ನೆಲಸಮವಾದ ಕಟ್ಟಡ, ಓರ್ವ ಸಾವು

Cylinder Blast: ಬೆಂಗಳೂರಿನ (Bengaluru) ಕೆ.ಆರ್ ಪುರಂನ ತ್ರಿವೇಣಿ ನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟಕ್ಕೆ (Cylinder Blast )ಬೃಹತ್ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗ್ಗೆ 7 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಭಾರೀ ಕಟ್ಟಡವೇ ನೆಲಸಮ ಆಗಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾನಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಅಧಿಕಾರಿಗಳಿಂದಲೂ ಸ್ಥಳ ಪರಿಶೀಲನೆ ನಡೆಯುತ್ತಿದೆ. ಸ್ಫೋಟಕ್ಕೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ.
Comments are closed.