Police new guidelines: ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಹೊಸ ಮಾರ್ಗಸೂಚಿ

Police new guidelines: ಸಾರ್ವಜನಿಕರು ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಪೊಲೀಸರ ನಡವಳಿಕೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು(Police new guidelines) , ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಹೊರಡಿಸಿದ್ದಾರೆ.

ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಮತ್ತು ಘನತೆ ಎದ್ದು ಕಾಣಬೇಕು. ಸಕಾರಾತ್ಮಕ ಮತ್ತು ವೃತ್ತಿಪರ ನಡವಳಿಕೆ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಮೇಲಿನ ನಂಬಿಕೆ ಮತ್ತು ಸಹಕಾರ ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.
ಪ್ರಮುಖ ಸೂಚನೆಗಳು:
-ಪೊಲೀಸ್ ಠಾಣೆಗೆ ಭೇಟಿ ನೀಡುವ ಯಾವುದೇ ವ್ಯಕ್ತಿಯ ಸಾಮಾಜಿಕ ಅಥವಾ ಆರ್ಥಿಕ ಹಿನ್ನೆಲೆ ಗಮನಿಸದೇ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು.
– ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಅಥವಾ ವರ್ತನೆ ತೋರದೆ ಸೌಜನ್ಯ ಮತ್ತು ಘನತೆಯಿಂದ ವರ್ತಿಸಬೇಕು. ಕಾನೂನು ಜಾರಿಗೊಳಿಸುವಲ್ಲಿ ದೃಢತೆಯನ್ನು ಪ್ರದರ್ಶಿಸಬೇಕು.
– ಯಾವುದೇ ಸಂದರ್ಭದಲ್ಲೂ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಯಾವುದೇ ರೀತಿಯ ಬೇಡಿಕೆ ಇಡುವುದರಿಂದ ಅಥವಾ ಯಾವುದೇ ಅಕ್ರಮ ಸಹಾಯ/ಲಾಭವನ್ನು ಸ್ವೀಕರಿಸುವುದರಿಂದ ಸಂಪೂರ್ಣವಾಗಿ ದೂರವಿರಬೇಕು.
– ಕರ್ತವ್ಯದ ಸಮಯದಲ್ಲಿ/ಕರ್ತವ್ಯ ಮುಗಿದ ನಂತರವೂ ನೈತಿಕವಾಗಿ ಇತರರಿಗೆ ಮಾದರಿಯಾಗುವಂತೆ ಇದ್ದು ಇಲಾಖೆಯ ನೀತಿ-ನಿಯಮಗಳನ್ನು ಎತ್ತಿಹಿಡಿಯಬೇಕು.
– ಸಮವಸ್ತ್ರದ ಮೇಲೆ ಧರಿಸುವ ಕ್ಯಾಮೆರಾಗಳನ್ನು ಮತ್ತು ಲಭ್ಯವಿರುವ ತಂತ್ರಜ್ಞಾನಗಳನ್ನು ಜವಾಬ್ದಾರಿಯುತವಾಗಿ ಬಳಸಿಕೊಳ್ಳಬೇಕು.
– ಮಹಿಳೆಯರನ್ನು ಸಂಜೆ 6ರ ನಂತರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಅಥವಾ ಹೇಳಿಕೆ ನೀಡಲು ಕರೆತರಬಾರದು.
Comments are closed.