Indian Origin Woman: ಬ್ರಿಟನ್‌ನಲ್ಲಿ ಭಾರತೀಯ ಯುವತಿ ಮೇಲೆ ಅತ್ಯಾಚಾರ

Share the Article

Indian Origin Woman: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ (Indian Origin Woman) ಮೇಲೆ ಅತ್ಯಾಚಾರ ನಡೆದಿದೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದು ಹೇಳಿದ್ದಾರೆ.

ಬ್ರಿಟನ್‌ನ ವೆಸ್ಟ್‌ ಮಿಡ್‌ಲ್ಯಾಂಡ್ಸ್‌ನಲ್ಲಿ (West Midlands) ಘಟನೆ ನಡೆದಿದ್ದು, ಕೃತ್ಯ ಎಸಗಿದ ಕಾಮುಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ತನಿಖೆಗೆ ತಂಡಗಳನ್ನು ರಚಿಸಿದ್ದು, ಶೀಘ್ರವೇ ಬಂಧಿಸಲಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರೋನನ್ ಟೈರರ್ ತಿಳಿಸಿದ್ದಾರೆ.

ಅಲ್ಲದೇ ಈಗಾಗಲೇ ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಲಾಗಿದ್ದು, ಆರೋಪಿಯ ಫೋಟೋವನ್ನೂ ರಿಲೀಸ್‌ ಮಾಡಲಾಗಿದೆ. ಆರೋಪಿ ಹುಡುಕಾಟಕ್ಕೆ ತಮ್ಮೊಂದಿಗೆ ಸಹಕರಿಸುವಂತೆ ಸ್ಥಳೀಯ ನಿವಾಸಿಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ.

Comments are closed.