Karnataka Gvt : ಗ್ರಾಮಗಳಲ್ಲಿ ಲೇಔಟ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪರ್ಮಿಷನ್- ಏನೆಲ್ಲಾ ದಾಖಲೆ ಬೇಕು?

Karnataka Gvt: ರಾಜ್ಯದ ಗ್ರಾಮ ಪಂಚಾಯತಿ (Grama Panchayat) ವ್ಯಾಪ್ತಿಯಲ್ಲಿ ಬಡಾವಣೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ (Karnataka government) ಅನುಮತಿಸಿ ಆದೇಶಿಸಿದೆ.

ಹೌದು, ರಾಜ್ಯದ ಗ್ರಾಮ ಪಂಚಾಯತಿ (Grama Panchayat) ವ್ಯಾಪ್ತಿಯಲ್ಲಿ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶಗಳಲ್ಲಿನ ಭೂಪರಿವರ್ತಿತ (converted land) ಜಮೀನುಗಳಲ್ಲಿ ಬಡಾವಣೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಯವರು ಮಾಹಿತಿ ಹಂಚಿಕೊಂಡಿದ್ದು, ಭೂಪರಿವರ್ತಿತ ಜಮೀನುಗಳಲ್ಲಿ ಬಡಾವಣೆಗಳ ವಿನ್ಯಾಸ ಅನುಮೋದನೆಯ ಕುರಿತು ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆಯ ಮೂಲಕ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿಯನ್ನು ನೀಡಲು, ಗ್ರಾಮ ಪಂಚಾಯತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಗಳು, ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಬಡಾವಣೆ ನಕ್ಷೆಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳಬೇಕಾಗಿದೆ ಎಂದು ತಿಳಿಸಿರುವ ಸಚಿವರು ಅಭಿವೃದ್ಧಿದಾರರು ವಿನಿಯಮ 4(1) ರಲ್ಲಿ ತಿಳಿಸಿರುವಂತೆ ನಮೂನೆ-1ರಲ್ಲಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಪಂಚಾಯತಿಗೆ ಸಲ್ಲಿಸಬೇಕೆಂದು ಹೇಳಿದ್ದಾರೆ.
ಅಲ್ಲದೆ ಬಡಾವಣೆಯ ಮಾಲೀಕರು, ವಿನಿಯಮ-11 ರ ಪ್ರಕಾರ ಅನುಮೋದಿತ ಬಡಾವಣೆಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳಂತೆ ಸಂಬಂಧಿಸಿದ ಇಲಾಖೆಗಳಾದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಎಸ್ಕಾಂ ಹಾಗೂ ಅವಶ್ಯಕ ಇತರೆ ಇಲಾಖೆಗಳಿಂದ ಅನುಮೋದಿತ ವಿನ್ಯಾಸದಂತೆ ದೃಢೀಕೃತ ಅಂದಾಜು ಪಟ್ಟಿಗಳನ್ವಯ ಅನುಷ್ಟಾನ ಮಾಡಬೇಕಾಗುತ್ತದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
Comments are closed.