Kadaba: ಕಡಬ: ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ಟ್ಯಾಪರ್‌ ಮೃತ

Share the Article

Kadaba: ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಮರ್ದಾಳ ಸಮೀಪದ ಸಮೀಪದ ಐತ್ತೂರು ಗ್ರಾಮದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ರಬ್ಬರ್‌ ವಿಭಾಗದ RRK 2014 ನೇ ರಬ್ಬರ್‌ ತೋಟ ಮರ್ಧಾಳ ಬ್ರಾಂತಿಕಟ್ಟೆ ಎಂಬಲ್ಲಿ ಖಾಯಂ ರಬ್ಬರ್‌ ಟ್ಯಾಪಿಂಗ್‌ ಕೆಲಸ ಮಾಡುತ್ತಿದ್ದರುವಾಗಲೇ ಹೃದಯಾಘಾತ ಅಥವಾ ಇನ್ಯಾವುದೋ ರೀತಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಸುರೇಶ್‌ ಎಂಬುವವರೇ ಮೃತ ವ್ಯಕ್ತಿ.

ಅ.25 ರಂದು ಮಧ್ಯಾಹ್ನದ ವೇಳೆ ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿರುವ ಸಮಯ ಕುಸಿದು ಬಿದ್ದಿದ್ದಾರೆ. ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯಾಧಿಕಾರಿಯವರು ಪರಿಶೀಲನೆ ಮಾಡಿ ಮೃತರಾಗಿರುವುದಾಗಿ ಘೋಷಿಸಿದ್ದಾರೆ.

ಮೃತರ ಪತ್ನಿ ದಿವ್ಯ ಎಂಬುವವರು ದೀಪಾವಳಿ ಹಬ್ಬದ ಕಾರಣ ಮಕ್ಕಳನ್ನು ಕರೆದುಕೊಂಡು ಸುಳ್ಯ ತಾಲೂಕಿನ ಕೂಟೇಲು ಎಂಬಲ್ಲಿಗೆ ಹೋಗಿದ್ದರು. ಪತಿಯ ಅಣ್ಣನ ಮಗ ಕರೆ ಮಾಡಿ ಮಾಹಿತಿ ನೀಡಿದ್ದು, ಸುಳ್ಯದಿಂದ ಹೊರಟು ಕಡಬ ಸರಕಾರಿ ಆಸ್ಪತ್ರೆಗೆ ಬರುವಾಗ ವೈದ್ಯಾಧಿಕಾರಿಯವರು ಮೃತಪಟ್ಟಿರುವುದು ಹೇಳಿದ್ದಾರೆ.

ಈ ಘಟನೆ ಸಂಬಂಧ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.