Droupadi Murmu: ರಫೇಲ್‌ನಲ್ಲಿ ಹಾರಾಟ ನಡೆಸಿ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

Droupadi Murmu: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ಫ್ರೆಂಚ್ ಏರೋಸ್ಪೇಸ್ ದೈತ್ಯ ಡಸಾಲ್ಟ್ ಏವಿಯೇಷನ್ ತಯಾರಿಸಿದ ರಫೇಲ್ ವಿಮಾನದಲ್ಲಿ (Rafale Fighter Jet) ಹಾರಾಟ ನಡೆಸಿದ್ದಾರೆ. ಈ ಮೂಲಕ ರಫೇಲ್‌ನಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮುರ್ಮು ಅವರು ಯುದ್ಧ ವಿಮಾನದಲ್ಲಿ ನಡೆಸುತ್ತಿರುವ ಎರಡನೇ ಹಾರಾಟ ಇದು. ಭಾರತದ ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್ 2023ರ ಏಪ್ರಿಲ್ 8 ರಂದು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಜೆಟ್‌ನಲ್ಲಿ ಮುರ್ಮು ಹಾರಾಟ ನಡೆಸಿದ್ದರು. ಹೀಗೆ ಹಾರಾಟ ನಡೆಸಿದ ಮೂರನೇ ರಾಷ್ಟ್ರಪತಿ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಂಡರು.
Comments are closed.