Chikkamagaluru: ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿ ಇಬ್ಬರು ಸಾವು

Chikkamagaluru: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಬಿಜೆಪಿ ಮುಖಂಡ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ.

ಶೃಂಗೇರಿ ತಾಲೂಕಿನ ಕೆರೆಗದ್ದೆ ಗ್ರಾಮದಲ್ಲಿ ಕಾಡಾನೆ ದಾಳಿ ನಡೆದಿದೆ. ಬಿಜೆಪಿ ಮುಖಂಡ ಹರೀಶ್ (47), ಉಮೇಶ್ (44) ಮೃತಪಟ್ಟವರು ಎಂದು ವರದಿಯಾಗಿದೆ.
ಸೊಪ್ಪು ತರಲು ಮನೆಯ ಹಿಂಭಾಗ ತೆರಳಿದ್ದಾಗ ಕಾಡಾನೆ ದಾಳಿ ಮಾಡಿದೆ. ಕೆರೆಕಟ್ಟೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮೃತದೇಹಗಳ ಬಳಿಯೇ ಕಾಡಾನೆ ಇರುವುದರಿಂದ ಶವಗಳನ್ನು ಸಾಗಿಸಲು ತೊಂದರೆಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಘಟನಾ ಸ್ಥಳದಲ್ಲಿದ್ದಾರೆ. ಸ್ಥಳೀಯರು ಈ ಘಟನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆಟ್‌ವರ್ಕ್ ಗಿಸದ ಈ ಪ್ರದೇಶದಲ್ಲಿ ಕಾಡಾನೆ ಸಂಚರಿಸುತ್ತಿದ್ದು, ಮಾಹಿತಿ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Comments are closed.