Sharan Pumpwell: ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಬಂಧನ

Sharan Pumpwell: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಪೊಲೀಸರು ಬಂಧನ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟನ್ನು ಶೇರ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವಿಹಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ವಿರುದ್ಧ ಸುಮೊಟೋ ಪ್ರಕರಣ ದಾಖಲಿಸಿ ಬಂಧನ ಮಾಡಲಾಗಿದೆ. ಕದ್ರಿ ಠಾಣೆಯ ನಾಗರಾಜ್ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಂಗಳೂರು ಕದ್ರಿ ಪೊಲೀಸರು ಶರಣ್ ಪಂಪ್‌ವೆಲ್ ಅವರನ್ನು ವಶಕ್ಕೆ ಪಡೆದಿದ್ದು, ಯಾವುದೇ ನೋಟಿಸ್ ನೀಡದೆ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಶರಣ್ ಪಂಪ್‌ವೆಲ್ ಬಂಧನವಾಗುತ್ತಿದ್ದಂತೆ ಕದ್ರಿ ಠಾಣೆಗೆ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗಮಿಸಿ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಎನ್ನುವವರು ಆರ್‌ಎಸ್‌ಎಸ್ ಮುಖಂಡರ ಭಾಷಣದ ತುಣಕನ್ನು ಶೇರ್ ಮಾಡಿದ್ದರು. ಕಳೆದ ಎರಡು ವರ್ಷಗಳ ಹಿಂದೆ ದ.ಕ. ಜಿಲ್ಲೆಯಲ್ಲಿ ಎಷ್ಟು ಮಕ್ಕಳು ಹುಟ್ಟಿದರು ಎಂದು ನಾನೊಂದು ಲೆಕ್ಕ ತೆಗೆದರೆ 45700 ಮಕ್ಕಳು ಹುಟ್ಟಿದರು ಅದರಲ್ಲಿ 23200 ಮಕ್ಕಳು ಹಿಂದೂಗಳು 22200 ಮಕ್ಕಳು ಅಲ್ಪಸಂಖ್ಯಾತರ ಮಕ್ಕಳು. ನಮ್ಮ ಜಿಲ್ಲೆಯ 78% ಜನಸಂಖ್ಯೆಗೆ ಹುಟ್ಟಿದ ಮಕ್ಕಳು 23000. 28% ಜನಸಂಖ್ಯೆಗೆ ಹುಟ್ಟಿದ ಮಕ್ಕಳು 22000. ಹಾಗಾದರೆ ಇನ್ನೊಂದು 15 ವರ್ಷಗಳಲ್ಲಿ ನಮ್ಮ ಊರು ಎಲ್ಲಿಗೆ ಹೋಗುತ್ತೆ? ಆಗ ದೇಶ ಉಳಿಯುತ್ತ ಸಮಾಜ ಉಳಿಯುತ್ತ? ನಾವೊಂದು ನಿಶ್ಚಯ ಮಾಡಬೇಕಿದೆ ಎಂದು ಆರ್‌ಎಸ್‌ಎಸ್ ಮುಖಂಡ ಭಾಷಣ ಮಾಡಿದ್ದರು.
ಈ ಭಾಷಣದ ತುಣಕನ್ನು ಮುಸ್ಲಿಂರ ಜನಸಂಖ್ಯೆ ಜಿಹಾದ್ ಮೆಟ್ಟಿ ನಿಲ್ಲೋಣ ಎಂಬ ವಾಕ್ಯದಡಿಯಲ್ಲಿ ವಿಕಾಸ್ ಪುತ್ತೂರು ಶೇರ್ ಮಾಡಿದ್ದರು ಎಂದು ವರದಿಯಾಗಿದೆ. ಈ ಪೋಸ್ಟನ್ನೇ ಶರಣ್ ಪಂಪ್‌ವೆಲ್ ಮಾಡಿದ್ದರು.
A1 ಆರೋಪಿ ವಿಕಾಸ್ ಪುತ್ತೂರು, A2 ಆರೋಪಿ ಶರಣ್ ಪಂಪ್‌ವೆಲ್ ವಿರುದ್ಧ ಬಿಎನ್‌ಎಸ್ 353(2) ಅಡಿ ಎಫ್‌ಐಆರ್ ದಾಖಲಾಗಿದೆ.
Comments are closed.