Earthquake: ಕಲಬುರಗಿ ಮತ್ತು ವಿಜಯಪುರದಲ್ಲಿ ಭೂಮಿ ಕಂಪನ

Share the Article

Earthquake: ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿರುವ ಘಟನೆ ನಡೆದಿದೆ. ರಾತ್ರಿ 10.05 ರ ಸುಮಾರಿಗೆ ಎರಡು ಬಾರಿ ಭೂಮಿ ಕಂಪನವಾಗಿದೆ. ಇದರಿಂದ ಅಲ್ಲಿನ ಜನರು ಭಯಭೂತರಾಗಿದ್ದು, ವಿಜಯಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ಎರಡು ತಿಂಗಳಲ್ಲಿ ಒಟ್ಟು 12 ಬಾರಿ ಭೂಮಿ ಕಂಪನದ ಅನುಭವವಾಗಿದೆ.

ವಿಜಯಪುರದ ಜೊತೆಗೆ ಕಲಬುರಗಿ ಜಿಲ್ಲೆಯಲ್ಲೂ ಭೂಮಿ ಕಂಪನಗೊಂಡಿದೆ. ಕಲಬುರಗಿಯ ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಪಟವಾದ ಗ್ರಾಮಗಳಲ್ಲಿ ಭೂಕಂಪನ ಸಂಭವಿಸಿದೆ. ಕಲಬುರಗಿಯಲ್ಲಿ ಒಂದೇ ದಿನದಲ್ಲಿ ನಾಲ್ಕು ಬಾರಿ ಭೂಮಿ ಕಂಪನ ಉಂಟಾಗಿದೆ. ರಾತ್ರಿ ಸಮಯದಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಯಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಭೂಮಿ ನಡುಗಿದೆ.

Comments are closed.